ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಅಷ್ಟು ಕಾಮನ್ ಸೆನ್ಸ್ ಇಲ್ಲದೇ ಏನ್ರೀ ಮಾಡ್ತೀರಾ ನೀವು ಇಲ್ಲಿ! ದ‌ಕಜಿಲ್ಲಾಧಿಕಾರಿ, ಆರೋಗ್ಯಾಧಿಕಾರಿಗೆ, ಸಿಎಂ ಬೊಮ್ಮಾಯಿ ತರಾಟೆ..!

ಮಂಗಳೂರು:ಕೋವಿಡ್-19 ನಿಯಂತ್ರಣ ಸಂಬಂಧ ಮಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಭೆಯಲ್ಲಿ

ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರಗೆ ಸಿಎಂ ಬಸವರಾಜ ಬೊಮ್ಮಾಯಿ ತರಾಟೆ ಘಟನೆ ನಡೆದಿದೆ ಮಾಸ್ಕ್, ಗ್ಲೌಸ್ ಇಲ್ಲದೇ ಏನ್ ಆಡಳಿತ ಮಾಡ್ತೀರಾ ಇಲ್ಲಿ? ಆರೋಗ್ಯ ಸಿಬ್ಬಂದಿಗೆ ಬೇಕಾದ ಸವಲತ್ತು ಕೊಡೋಕೆ ನಿಮ್ಮಿಂದ ಆಗಲ್ವಾ? ಅಷ್ಟು ಕಾಮನ್ ಸೆನ್ಸ್ ಇಲ್ಲದೇ ಏನ್ರೀ ಮಾಡ್ತೀರಾ ನೀವು ಇಲ್ಲಿ ಎಸ್ ಡಿಆರ್ ಎಫ್ ಫಂಡ್ ಅದು, ಇದು ಪಡೆದು ಇವತ್ತೇ ಖರೀದಿ ಮಾಡಿ ಬೆಂಗಳೂರು ಬಿಟ್ಟು ಎಲ್ಲವನ್ನೂ ಇಲ್ಲೇ ಖರೀದಿಸಿ ಸಂಜೆ ನನಗೆ ರಿಪೋರ್ಟ್ ಮಾಡಿ ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಕುಮಾರ್ ಗೂ ಬೊಮ್ಮಾಯಿ ತರಾಟೆ ತೆಗೆದುಕೊಂಡರು.

ಏನಯ್ಯ, ನೀನ್ ಏನ್ ಮಾಡ್ತಾ ಇದೀಯ ಇಲ್ಲಿ ಅಂತ ಹೇಳು ನಿನ್ನತ್ರ ಏನು ಸಮಸ್ಯೆ ಇದೆ ಅಂತ ಡಿಸಿ ಗಮನಕ್ಕೆ ತರೋಕೆ ಗೊತ್ತಿಲ್ವಾ?

ಮೋಸ್ಟ್ ಸೀನಿಯರ್ ಹೆಲ್ತ್ ಆಫೀಸರ್ ಆಗಿದ್ರೂ ನೀನ್ ಏನ್ ನಿದ್ದೆ ಮಾಡ್ತಾ ಇದೀಯಾ ಮಾಸ್ಕ್, ಗ್ಲೌಸ್ ಎಷ್ಟು ಕೊರತೆ ಇದೆ ಅನ್ನೋದು ಲೆಕ್ಕ ಇಡೋಕೆ ಆಗಲ್ವಾ ನಿಂಗೆ, ನಿಮ್ಮ ಯಾವುದೇ ಸಮರ್ಥನೆ ನಂಗೆ ಬೇಡ, ಸಂಜೆಯೊಳಗೆ ನಂಗೆ ರಿಪೋರ್ಟ್ ಕೊಡಿ ಎಂದು ಅಧಿಕಾರಿಗಳ ಮೇಲೆ ಗರಂ ಅದ್ರು...

Edited By : Manjunath H D
PublicNext

PublicNext

12/08/2021 02:12 pm

Cinque Terre

85.65 K

Cinque Terre

16