ಬೆಂಗಳೂರು: ಕಾಂಗ್ರೆಸ್ಸಿನವರು ಬೇಕಾದರೆ ತಮ್ಮ ಪಕ್ಷದ ಕಚೇರಿಯಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲಿ. ಬೇಕಾದರೆ ಬಾರ್ ತೆರೆಯಲಿ, ನೆಹರು ಹುಕ್ಕಾ ಬಾರ್ ಎಂಬ ಹೆಸರಿನಲ್ಲಿ ತೆರೆಯಲಿ. ಈಗ ಇಂದಿರಾ ಕ್ಯಾಂಟೀನ್ ಅನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಮಾಡಬೇಕು ಅಂತ ಪ್ರಸ್ತಾಪಿಸಿದ್ದೇನೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ತಿರುಗೇಟು ಹೇಳಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, "ಕಾಂಗ್ರೆಸ್ಸಿನವರು ಇಂದಿರಾ ಕ್ಯಾಂಟೀನ್ ತೆರೆದಿರುವುದು ಅವರ ಎಟಿಎಂಗಳನ್ನು ತುಂಬಿಸಿಕೊಳ್ಳಲೇ ಹೊರತು, ಇಂದಿರಾ ಗಾಂಧಿ ಮೇಲಿನ ಪ್ರೀತಿಯಿಂದಲ್ಲ. ನೆಹರು, ಇಂದಿರಾ ಗಾಂಧಿ ಅವರ ಒಳ್ಳೆಯ ಕೊಡುಗೆಗಳನ್ನು ನೆನೆಯುತ್ತೇವೆ. ಆದರೆ ಅವರು ಮಾಡಿದ್ದ ಎಲ್ಲವನ್ನೂ ಒಪ್ಪಿಕೊಳುವುದ್ದಕ್ಕೆ ನಾವೇನು ಗುಲಾಮರಲ್ಲ" ಎಂದು ಕಾಂಗ್ರೆಸ್ ನಾಯಕರ ಆರೋಪಗಳಿಗೆ ತಿರುಗೇಟು ನೀಡಿದರು.
PublicNext
12/08/2021 02:39 pm