ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿ.ಟಿ ರವಿ, ಇಂದಿರಾ ಗಾಂಧಿ ಪಾದದ ಧೂಳಿಗೂ ಸಮವಲ್ಲ: ಈಶ್ವರ ಖಂಡ್ರೆ

ಬೆಂಗಳೂರು: ಕಾಂಗ್ರೆಸ್ ಕಚೇರಿಯಲ್ಲಿ ಹುಕ್ಕಾ ಬಾರ್ ತೆರೆಯಿರಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ ಹೇಳಿಕೆ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸಿ.ಟಿ ರವಿ ಮೇಲೆ ಕಿಡಿ ಕಾರಿದ್ದಾರೆ. ಸಿ.ಟಿ ರವಿ ಅವರು ಇಂದಿರಾ ಗಾಂಧಿ ಅವರ ಪಾದದ ಧೂಳಿಗೂ ಸಮವಲ್ಲ ಎಂದಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಮಾತನಾಡಿದ ಅವರು, ಬಿಜೆಪಿಯವರು ಇಂತಹ ಹೇಳಿಕೆ ನೀಡಿ ದೇಶ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಭಂಗ ತರಲು ಪ್ರಚೋದಿಸುತ್ತಿದ್ದಾರೆ. ಇವರು ರಾಜಕೀಯದಲ್ಲಿರಲು ಲಾಯಕ್ಕಿಲ್ಲ. ಸಿ.ಟಿ ರವಿ ಅವರನ್ನು ಪ್ರಧಾನ ಕಾರ್ಯದರ್ಶಿ ಮಾಡಿದ್ದು, ಇವರಿಗೆ ಚಂಬಲ್ ಘಾಟ್ ಉಸ್ತುವಾರಿ ನೀಡಬೇಕು. ಅವರನ್ನು ಚೆನ್ನಾಗಿ ಅರ್ಥಮಾಡಿಕೊಳ್ಳುತ್ತಾರೆ ಎಂದರು. ಮೇಕೆದಾಟು ಯೋಜನೆ ರಾಜ್ಯದ ಹಕ್ಕು. ಈಗಾಗಲೇ ಸುಪ್ರೀಂ ಕೋರ್ಟ್, ನ್ಯಾಯಾಧಿಕರಣ ತೀರ್ಪು ನೀಡಿದ್ದು, ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಆದರೂ ರಾಜ್ಯದ ಹಕ್ಕನ್ನು ಕಸಿಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ತಮಿಳುನಾಡಿಗೆ ಹೆದರಿ ಕರ್ನಾಟಕಕ್ಕೆ ಅನ್ಯಾಯ ಎಸಗುತ್ತಿದ್ದಾರೆ. ಸಿ.ಟಿ. ರವಿ ಅವರು ತಮಿಳುನಾಡಿನ ಪರವಾಗಿ ವಕಾಲತ್ತು ವಹಿಸಿದ್ದಾರೆ ಎಂದು ಖಂಡ್ರೆ ಕಿಡಿಕಾರಿದರು.

Edited By : Nagaraj Tulugeri
PublicNext

PublicNext

12/08/2021 05:16 pm

Cinque Terre

48.06 K

Cinque Terre

70

ಸಂಬಂಧಿತ ಸುದ್ದಿ