ನವದೆಹಲಿ: ಈ ಸಲದ ಅಧಿವೇಶನದಲ್ಲಿ ನಾನು ಒಂದು ದಿನವೂ ಗೈರು ಹಾಜರಾಗಿಲ್ಲ. ಅಧಿವೇಶನ ನಡೆದ ಎಲ್ಲ ದಿನವೂ ನಾನು ಭಾಗಿಯಾಗಿದ್ದೆ. ಆದರೆ ಕಲಾಪದಲ್ಲಿ ಯಾವುದೇ ವಿಷಯ ಚರ್ಚೆಯಾಗಿಲ್ಲ ಎಂದು ದೆಹಲಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಸುದ್ದಿಗೋಷ್ಟಿಯಲ್ಲಿ ಹೇಳಿದ್ದಾರೆ. ಚರ್ಚೆ ಮಾಡುವುದಕ್ಕೆ ವಿಪಕ್ಷಗಳಿಗೆ ಅವಕಾಶ ಮಾಡಿಕೊಟ್ಟಿಲ್ಲ. ಮುಂದಿನ ಅಧಿವೇಶನದಲ್ಲಾದರೂ ಅವಕಾಶ ನೀಡಬೇಕು. ಸುಗಮವಾಗಿ ಅಧಿವೇಶನ ನಡೆಯುವಂತೆ ನೋಡಿಕೊಳ್ಳಬೇಕು.
ರಾಜ್ಯಸಭೆಯಲ್ಲಿ ನನಗೆ ಮಾತನಾಡುವುದಕ್ಕೆ ಅವಕಾಶ ಸಿಕ್ಕಿಲ್ಲ. ಅವಕಾಶ ಸಿಕ್ಕರೆ ರೈತರ ಸಮಸ್ಯೆಗಳ ಬಗ್ಗೆ ಮಾತನಾಡುತ್ತೇನೆ. ಮುಂದಿನ ದಿನಗಳಲ್ಲಿ ಅವಕಾಶ ಸಿಗಬಹುದು ಎಂದು ದೇವೇಗೌಡ ಆಶಿಸಿದರು. ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ದೇವೇಗೌಡರ ಭೇಟಿಗೆ ಪ್ರೀತಮ್ ಗೌಡ ಅಸಮಾಧಾನ ವ್ಯಕ್ತಪಡಿಸಿರುವ ವಿಚಾರವಾಗಿ ಪ್ರರ್ಶನೆ ಕೇಳಿದಾಗ ಅಷ್ಟು ಕೆಳಮಟ್ಟಕ್ಕೆ ನನನ್ನು ಇಳಿಸಬೇಡಿ. ನೀವು ಕೂಡ ಈ ಬಗ್ಗೆ ನನ್ನ ಪ್ರಶ್ನೆ ಮಾಡಬೇಡಿ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದರು.
PublicNext
12/08/2021 08:21 pm