ಉಡುಪಿ: ಉಡುಪಿಯಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದ ಸಿಎಂ ಬಸವರಾಜ ಬೊಮ್ಮಾಯಿ ಇವತ್ತು ಬೆಳಿಗ್ಗೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.
ರಾಜ್ಯದಲ್ಲಿ ಕೊರೋನಾ ಹೆಚ್ಚಳ ವಿಚಾರವಾಗಿ ತಜ್ಞರ ಸಲಹೆ ಪಡೆದು ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು.
ಬೆಂಗಳೂರಿಗೆ ತೆರಳಿದ ತಕ್ಷಣ ತಜ್ಞರ ಜೊತೆ ಮಾತನಾಡುವೆ. ತಜ್ಞರ ವರದಿ ಆಧಾರದಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಇಂದೇ ತಜ್ಞರ ತುರ್ತು ಸಭೆ ಕರೆಯುತ್ತೇನೆ ಎಂದು ಹೇಳಿದ್ದಾರೆ.
ಇಂದು ವಲ್ಡ್ ಆರ್ಗನ್ ಡೊನೇಶನ್ ಡೇ ,ಇತ್ತೀಚಿಗೆ ಅಂಗಾಂಗ ಕಸಿ ಮಾಡುವ ತಂತ್ರಜ್ಞಾನ ಬಂದಿದೆ. ಅಂಗಾಂಗ ದಾನ ಮಾಡುವುದರಿಂದ ಇನ್ನೊಬ್ಬರ ಜೀವ ಉಳಿಸಬಹುದು. ಅಂಗಾಂಗ ಕಸಿ ಯಶಸ್ವಿಯಾಗುತ್ತಿದೆ. ಹೆಚ್ಚಿನ ಜನ ಅಂಗಾಂಗ ದಾನಕ್ಕೆ ಮುಂದೆ ಬರಬೇಕು.
ಇದರಿಂದ ಸಾವಿರಾರು ಜೀವ ಉಳಿಸಲು ಸಾಧ್ಯವಿದೆ ಎಂದರು. ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ.ಇತರರು ಕೂಡ ಸಹಿ ಹಾಕಬೇಕೆಂದು ಕರೆ ಕೊಡುತ್ತೇನೆ.ನಿಮ್ಮಿಂದ ಇನ್ನೊಂದು ಜೀವ ಉಳಿಸಲು ಸಾಧ್ಯವಿದ್ದರೆ ಯಾಕೆ ಮಾಡಬಾರದು? ಎಲ್ಲರೂ ಕೂಡ ಈ ಕುರಿತು ಸಂಕಲ್ಪ ಮಾಡೋಣ.ಕಿಡ್ನಿ ,ಹಾರ್ಟ್ ,ಲಿವರ್ ಇನ್ನೊಬ್ಬರ ಉಪಯೋಗಕ್ಕೆ ಬರಲಿ ಎಂದು ಹೇಳಿದರು.
PublicNext
13/08/2021 12:19 pm