ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪ ಅವರಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿರುವ ಘಾಟಿ ಸುಬ್ರಮಣ್ಯ ದೇವಾಲಯದ ಬಾಗಿಲು ತೆರೆಯಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀನಿವಾಸ್ ಅವರು, "ವೀಕೆಂಡ್, ವಿಶೇಷ ಹಾಗೂ ರಜಾ ದಿನಗಳಂದು ಜಿಲ್ಲಾಡಳಿತದ ವ್ಯಾಪ್ತಿಯಲ್ಲಿರುವ ದೇವಾಲಯಗಳನ್ನು ಬಂದ್ ಮಾಡಿ ಆದೇಶ ಹೊರಡಿಸಿದ್ದರು. ಅಷ್ಟೇ ಅಲ್ಲದೆ ನಾಗರ ಪಂಚಮಿ ನಿಮಿತ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಘಾಟಿ ಸುಬ್ರಹ್ಮಣ್ಯಕ್ಕೆ ಬರುತ್ತಾರೆ ಎಂಬ ಹಿನ್ನೆಲೆಯಲ್ಲಿ ದೇವಸ್ಥಾನ ಪ್ರವೇಶಕ್ಕೆ ನಿಷೇಧ ಹೇರಲಾಗಿತ್ತು. ಆದರೆ ಇದೀಗ ಯಡಿಯೂರಪ್ಪ ಅವರಿಗಾಗಿ ದೇವಸ್ಥಾನವನ್ನು ಓಪನ್ ಮಾಡಿ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಮಾಜಿ ಸಿಎಂ ಯಡಿಯೂರಪ್ಪ ಬರುತ್ತಾರೆ ಎಂಬ ಕಾರಣಕ್ಕೆ ಉಳಿದ ಭಕ್ತರಿಗೂ ದೇವರ ದರ್ಶನ ಪಡೆಯಲು ಅವಕಾಶ ನೀಡಲಾಗಿದೆ. ಈ ಮೂಲಕ ಯಡಿಯೂರಪ್ಪಗೆ ಮಾತ್ರ ಅವಕಾಶ ಎಂಬ ಆರೋಪ ತಪ್ಪಿಸಿಕೊಳ್ಳಲು ಯತ್ನ ಇದಾಗಿದೆ ಎಂಬ ಮಾತುಗಳು ಕೇಳಿ ಬಂದಿದೆ. ಬಿಎಸ್ ಯಡಿಯೂರಪ್ಪ ಅವರೊಂದಿಗೆ ಪುತ್ರ ವಿಜಯೇಂದ್ರ ಹಾಗೂ ಶಾಸಕ ಎಸ್ ಆರ್ ವಿಶ್ವನಾಥ್ ಕೂಡ ಇದ್ದರು.
PublicNext
13/08/2021 12:51 pm