ತುಮಕೂರು: ಥೂ ನಿನ್ನ ಯೋಗ್ಯತೆಗೆ ಬೆಂಕಿ ಹಾಕಾ..ನೀನು ಅಯೋಗ್ಯ ನನ್ಮಗ..ಏನೋ ನೀನು ಮಾತಾಡೋದು? ನೀನು ಮಾತಾಡೋದು ಬರೀ ಸುಳ್ಳು. ನಾನು ಜೀವನದಲ್ಲೇ ಸುಳ್ಳು ಮಾತಾಡಿಲ್ಲ...
ಈ ಎಲ್ಲ ಸಂಭಾಷಣೆ ಕೇಳಿ ಬಂದಿದ್ದು ತುಮಕೂರು ಸಂಸದ ಜಿ.ಎಸ್ ಬಸವರಾಜ್ ಹಾಗೂ ಶಾಸಕ ಗುಬ್ಬಿ ಶ್ರೀನಿವಾಸ್ ಅವರ ಮಧ್ಯೆ. ಗುಬ್ಬಿ ತಾಲೂಕಿನ ಚೇಳೂರು ಸಮೀಪದ ಸಿ. ನಂದಿಹಳ್ಳಿ ಗ್ರಾಮದಲ್ಲಿ ನಡೆದ ಬೆಸ್ಕಾಂ ವಿದ್ಯುತ್ ಎಂಎಸ್‍ಎಸ್ ಸ್ಟೇಷನ್ ಉದ್ಘಾಟನೆಯ ವೇಳೆ ಇಬ್ಬರು ನಾಯಕರು ಕೈಕೈ ಮಿಲಾಯಿಸಿಕೊಂಡು ಜಗಳಕ್ಕಿಳಿದ್ದಾರೆ.
ಚೇಳೂರು ಹೋಬಳಿಯಲ್ಲಿ ಚೆಕ್ ಡ್ಯಾಂ ನಿರ್ಮಿಸಲು ಕೇಂದ್ರ ಸರ್ಕಾರ 500 ಕೋಟಿ ಮೀಸಲಿಟ್ಟಿದೆ ಎಂದು ಸಭೆಯಲ್ಲಿ ಜಿಎಸ್ ಬಸವರಾಜು ಹೇಳಿದರು. ಈ ವೇಳೆ ರೊಚ್ಚಿಗೆದ್ದ ಗುಬ್ಬಿ ಶ್ರೀನಿವಾಸ್, ರೈತರಿಗೆ ಸುಳ್ಳು ಹೇಳ್ತಿಯಾ, ನಿಮ್ ಯೋಗ್ಯತೆಗೆ ಇಷ್ಟು ಬೆಂಕಿ ಹಾಕ.. ಸುಳ್ಳು ಯಾಕೆ ಬೊಗಳುತ್ತೀಯಾ..? ವಯಸ್ಸಾಗಿದೆ ಈಗಲಾದ್ರೂ ಸುಳ್ಳು ಹೇಳೋದನ್ನ ನಿಲ್ಲಿಸು ಎಂದು ಏಕವಚನದಲ್ಲಿಯೇ ಮಾತಿಗಿಳಿದಿದ್ದಾರೆ.
PublicNext
14/08/2021 03:02 pm