ನವದೆಹಲಿ: ಇತ್ತಿಚೆಗೆ ಸರಣಿ ಎನ್ನುವಂತೆ ಅತ್ಯಾಚಾರಕ್ಕೀಡಾಗಿ ಕೊಲೆಯಾದ 9 ವರ್ಷದ ಬಾಲಕಿಯ ಕುಟುಂಬಸ್ಥರ ಫೋಟೋವನ್ನು ಶೇರ್ ಮಾಡಿ ಕಾನೂನನ್ನು ಉಲ್ಲಂಘಿಸಿದ್ದಾರೆ ಎಂಬ ಕಾರಣ ನೀಡಿ ರಾಹುಲ್ ಗಾಂಧಿಯವರ ಟ್ವಿಟ್ಟರ್ ಖಾತೆಯನ್ನು ಇದಾದ ಬಳಿಕ ಈಗ ಪಕ್ಷದ ಖಾತೆಯ ಜೊತೆಗೆ ಹಲವು ನಾಯಕರ ಮತ್ತು ಪಕ್ಷದ ಅಧಿಕೃತ ಟ್ವಿಟ್ಟರ್ ಖಾತೆಯನ್ನು ಬ್ಲಾಕ್ ಮಾಡಲಾಗಿತ್ತು.
ಇಂದು ಕಾಂಗ್ರೆಸ್ ಪಕ್ಷದ ಟ್ವಿಟ್ಟರ್ ಖಾತೆ ಸಕ್ರಿಯಗೊಂಡಿದ್ದು, ಸತ್ಯಮೇವ ಜಯತೇ ಎಂದು ಬರೆದು ಟ್ವೀಟ್ ಮಾಡಿದೆ. ಎಲ್ಲ ಕಾಂಗ್ರೆಸ್ ಖಾತೆಯಗಳು ಅನ್ ಲಾಕ್ ಆಗಿದೆ. ಅನ್ ಲಾಕ್ ಆಗಲು ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ ಎಂದು ಕಾಂಗ್ರೆಸ್ ಸೋಷಿಯಲ್ ಮೀಡಿಯಾ ಮುಖ್ಯಸ್ಥ ರೋಹನ್ ಗುಪ್ತ ತಿಳಿಸಿದ್ದಾರೆ.
ಶನಿವಾರ ರಾಹುಲ್ ಗಾಂಧಿ ಟ್ವಿಟ್ಟರ್ ವಿರುದ್ಧ ಕಿಡಿ ಕಾರಿದ್ದರು. ಇದು ನಮ್ಮ ಪ್ರಜಾಪ್ರಭುತ್ವದ ಮೇಲಿನ ದಾಳಿಯಾಗಿದೆ. ನಮಗೆ ಸಂಸತ್ ನಲ್ಲಿ ಮಾತನಾಡಲು ಅವಕಾಶ ಕೊಟ್ಟಿಲ್ಲ. ಭರವಸೆ ಬೆಳಕಾಗಿ ಟ್ವಿಟ್ಟರ್ ಇದೆ ಎಂದು ಭಾವಿಸಿದ್ದೆ. ಆದರೆ ಟ್ವಿಟ್ಟರ್ ಆ ರೀತಿ ಇಲ್ಲ. ಸರ್ಕಾರದ ಪರವಾಗಿ ಟ್ವಿಟ್ಟರ್ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದ್ದರು.
ಭಾರತದಲ್ಲಿ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತರ ಫೋಟೋ, ಹೆಸರು, ಪೋಷಕರ ಫೋಟೋಗಳನ್ನು ಪ್ರಕಟಿಸುವಂತಿಲ್ಲ. ಇದು ಕಾನೂನಿನ ಉಲ್ಲಂಘನೆ. 2018ರಲ್ಲಿ ಜಮ್ಮು ಕಾಶ್ಮೀರ ಕಥುವಾದ 8 ವರ್ಷದ ಬಾಲಕಿಯ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ಗುರುತನ್ನು ಮಾಧ್ಯಮ ಸಂಸ್ಥೆಗಳು ಪ್ರಕಟಿಸಿತ್ತು. ಈ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಡ ದೆಹಲಿ ಹೈಕೋರ್ಟ್ ವಿಚಾರಣೆ ನಡೆಸಿ 12 ಮಾಧ್ಯಮ ಸಂಸ್ಥೆಗಳಿಗೆ ತಲಾ 10 ಲಕ್ಷ ರೂ. ದಂಡವನ್ನು ವಿಧಿಸಿತ್ತು.
PublicNext
14/08/2021 03:37 pm