ವಿಜಯಪುರ: 75ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಲು ನಗರಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತೆಯರು ಘೇರಾವ್ ಹಾಕಿ ಪ್ರತಿಭಟನೆ ನಡೆಸಿದರು.
ಜಿಲ್ಲಾಡಳಿತವು ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಆವರಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಹೀಗಾಗಿ ಧ್ವಜಾರೋಹಣಕ್ಕೆ ಸಚಿವೆ ಜೊಲ್ಲೆ ಆಗಮಿಸುತ್ತಿದ್ದಂತೆ ಕಾಂಗ್ರೆಸ್ನ ಮಹಿಳಾ ಕಾರ್ಯಕರ್ತೆಯರು ಘೇರಾವ್ ಹಾಕಿ, ಕಪ್ಪು ಬಟ್ಟೆ ಪ್ರದರ್ಶನ ಮಾಡಿದರು.
ಭ್ರಷ್ಟಾಚಾರ ಆರೋಪ ಹೊತ್ತಿರುವ ಸಚಿವೆ ವಿಜಯಪುರ ಜಿಲ್ಲೆಗೆ ಬೇಡವೆಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತೆಯರನ್ನು ತಡೆಯಲು ಪೊಲೀಸರು ಹರ ಸಾಹಸ ಪಟ್ಟರು.
PublicNext
15/08/2021 10:36 am