ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಮುಂದೆ ಸಿಎಂ ಆಗ್ತಾರಾ ಅಂತಾ ಸಿದ್ದರಾಮಯ್ಯ ಭವಿಷ್ಯ ಹೇಳಲಿ: ಭೈರತಿ ಬಸವರಾಜ್ ಸವಾಲ್...!

ದಾವಣಗೆರೆ: "ಸಿಎಂ ಆಗಿದ್ದಾಗ ಸಿದ್ದರಾಮಯ್ಯ ಸರ್ಕಾರ ಆಕಾಶದಲ್ಲಿ ಹಾರಿಕೊಂಡು ಹೋಗಿತ್ತೇನ್ರೀ. ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಅಧಿಕಾರ ವಹಿಸಿಕೊಡು ಎಂಟತ್ತು ದಿನ ಆಗಿಲ್ಲ. ನಾಲ್ಕು ಜಿಲ್ಲೆಗಳ ಪ್ರವಾಸ ಮಾಡಿದ್ದಾರೆ. ಬೆಂಗಳೂರು ನಗರದ ಅಭಿವೃದ್ಧಿ ಸಂಬಂಧ ಸಭೆ ನಡೆಸಿದ್ದಾರೆ. ಎಲ್ಲೆಲ್ಲೋ ಕುಳಿತು ಏನೇನೋ‌ ಮಾತನಾಡಿದರೆ ಹೇಗೆ'' ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಪ್ರಶ್ನೆ ಮಾಡಿದರು.

ಮಾಧ್ಯಮದವರ ಜೊತೆ ಮಾತನಾಡಿದ ಅವರು, ಏಳು ಸಾವಿರ ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಸಿಎಂ ಹೇಳಿದ್ದಾರೆ. ಮೈಸೂರಿನಲ್ಲಿ ನಾನು ಸಹ ಪ್ರಗತಿಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡಿದ್ದೆ. ಕೋವಿಡ್ ತಡೆ ಮಾಡಬೇಕಿದೆ. ಕೊರೊನಾ ಮೂರನೇ ಅಲೆಯಲ್ಲಿ ಮಕ್ಕಳಿಗೆ ಸಮಸ್ಯೆಯಾಗುತ್ತದೆ ಎಂಬ ವರದಿ ನೀಡಿದ್ದಾರೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಗಡಿ ಜಿಲ್ಲೆಗೆ ಯಾರಾದರೂ ವಿರೋಧ ಪಕ್ಷದ ನಾಯಕರು ಹೋಗಿದ್ದಾರಾ. ಸಲಹೆ ಕೊಟ್ಟಿದ್ದಾರಾ. ಗಡಿ ಜಿಲ್ಲೆಗಳ ವಸ್ತುಸ್ಥಿತಿ ಬಗ್ಗೆ ಮಾಹಿತಿ ಪಡೆದಿದ್ದಾರಾ. ಯಾವುದೂ ಮಾಡಿಲ್ಲ. ಎಲ್ಲೋ ಕುಳಿತುಕೊಂಡು ಏನೇನೋ ಹೇಳಿದರೆ ಆಗಿ ಬಿಡುತ್ತಾ. ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ವಸ್ತುಸ್ಥಿತಿ ಅರ್ಥ ಮಾಡಿಕೊಳ್ಳಬೇಕು. ಸಕಾರಾತ್ಮಕ ಟೀಕೆ ಮಾಡಲಿ. ಸರ್ಕಾರ ಟೇಕಾಫ್ ಆಗಿಲ್ಲ. ಬಿದ್ದು ಹೋಗುತ್ತೆ ಅಂತೇಳುವ ಮೂಲಕ ಭವಿಷ್ಯ ಹೇಳ್ತಾರಾ. ಅವ್ರ ಭವಿಷ್ಯ ಅವರೇ ಹೇಳಿಕೊಳ್ಳುವ ಸ್ಥಿತಿಯಲ್ಲಿಲ್ಲ. ಮುಂದೆ ಸಿಎಂ ಆಗ್ತಾರಾ ಎಂದು ಸಿದ್ದರಾಮಯ್ಯ ಹೇಳಲಿ. ಸಿಎಂ ಬೊಮ್ಮಾಯಿ ಅತ್ಯುತ್ತಮ‌ ಕೆಲಸ ಮಾಡ್ತಿದ್ದಾರೆ ಎಂದರು.

Edited By : Shivu K
PublicNext

PublicNext

15/08/2021 12:11 pm

Cinque Terre

91.79 K

Cinque Terre

4

ಸಂಬಂಧಿತ ಸುದ್ದಿ