ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಸಾಮುದ್ರಾ ಸಂತ್ರಸ್ತ ಬಾಲಕಿ ಪೋಷಕರ ಭೇಟಿಯಾದ ಸಚಿವ ಬಿ.ಶ್ರೀರಾಮುಲು

ಚಿತ್ರದುರ್ಗ : ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಹೋಬಳಿಯ ಇಸಾಮುದ್ರಾ ಗ್ರಾಮದ ಅಪ್ರಾಪ್ತ ಬಾಲಕಿ ಅತ್ಯಾಚಾರ ಮತ್ತು ಕೊಲೆಯಾದ ಸಂತ್ರಸ್ತೆಯ ಪೋಷಕರ ಮನೆಗೆ ರಾಜ್ಯ ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಭಾನುವಾರ ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಬಾಲಕಿಯ ಸಂತ್ರಸ್ತ ಕುಟುಂಬಕ್ಕೆ ಸಚಿವರು ವೈಯಕ್ತಿಕವಾಗಿ ರೂ.2ಲಕ್ಷ ನೀಡುವುದರ ಜತೆಗೆ ಸರ್ಕಾರದ ವಿವಿಧ ಸೌಲಭ್ಯಗಳ ಕಲ್ಪಿಸುವ ಭರವಸೆ ನೀಡಿದರು.

ಈ ವೇಳೆ ಮಾತನಾಡಿದ ಸಚಿವ ಬಿ.ಶ್ರೀರಾಮುಲು, ಅಪ್ರಾಪ್ತ ಬಾಲಕಿಯ ಸಂತ್ರಸ್ತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಲು, ಅವರ ನೋವುಗಳನ್ನು ಹಂಚಿಕೊಳ್ಳಲು ಭೇಟಿ ನೀಡಿದ್ದು, ಯಾರಿಗೂ ಕೂಡ ಇಂತಹ ಪರಿಸ್ಥಿತಿ ಬರಬಾರದು. ಇಂತಹ ಪ್ರಕರಣಗಳು ಮರುಕಳಿಸಬಾರದು. ಇದೇ ಕೊನೆಯಾಗಬೇಕು ಎಂದು ಹೇಳಿದರು.

ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪಿಯನ್ನು ಈಗಾಗಲೇ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾನೂನಿನ ಪ್ರಕಾರ ಆರೋಪಿಯನ್ನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ಕೆ.ನಂದಿನಿದೇವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ರಾಧಿಕಾ, ಸಂತ್ರಸ್ತ ಬಾಲಕಿಯ ಪೋಷಕರು ಇದ್ದರು.

Edited By : Nirmala Aralikatti
PublicNext

PublicNext

15/08/2021 04:41 pm

Cinque Terre

81.22 K

Cinque Terre

1

ಸಂಬಂಧಿತ ಸುದ್ದಿ