ನವದೆಹಲಿ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಳೆದ 7 ವರ್ಷಗಳಿಂದಲೂ ಹೇಳಿದ್ದನ್ನೇ ಹೇಳುತ್ತಿದ್ದಾರೆ ಆದ್ರೆ ಹೇಳಿದ್ದನ್ನು ಜಾರಿಗೆ ತರುತಿಲ್ಲ ಎಂದು ಸಮರ್ಪಕವಾಗಿ ಜಾರಿ ಮಾಡಿಲ್ಲ ಎಂದು ಕಾಂಗ್ರೆಸ್ ಮುಖಂಡ, ಹಾಗೂ ರಾಜ್ಯಸಭೆಯ ವಿರೋಧಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ.
ಸ್ವಾಂತಂತ್ರ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣ ಕುರಿತು ಪ್ರತಿಕ್ರಿಯೆ ನೀಡಿದ ಅವರು ಪ್ರಧಾನಿ ಹೇಳುವುದು ಒಂದು ಮಾಡುವುದು ಮತ್ತೊಂದು ಎಂಬ ಹಾದಿಯಲ್ಲಿ ಸಾಗಿದ್ದಾರೆ ಎಂದು ಅಸಮಾಧಾನ ಹೊರ ಹಾಕಿದರು.
ರೈತರ ಭವಿಷ್ಯಕ್ಕೆ ಹಾನಿಯಾಗುವ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಒತ್ತಾಯ ಮಾಡಿ ದೇಶದ ರೈತರು ಒಂದು ವರ್ಷಗಳಿಂದ ನಿರಂತರವಾಗಿ ಪ್ರತಿಭಟನೆ ಮಾಡುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ, ರೈತ ನಾಯಕರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸುವ ಯಾವುದೇ ಪ್ರಾಮಾಣಿಕ ಪ್ರಯತ್ನ ಮಾಡುತ್ತಿಲ್ಲ. ಬರಿ ಘೋಷಣೆಯಿಂದ ಜನರನ್ನು ಮರಳು ಮಾಡುವುದೇ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಟೀಕಿಸಿದರು.
ಕಳೆದ 7 ವರ್ಷಗಳಿಂದ ಸ್ವಾತಂತ್ರ್ಯ ದಿನದ ಭಾಷಣದಲ್ಲಿ ಹಿಂದೆ ಹೇಳಿದ ವಿಷಯಗಳನ್ನು ಮತ್ತೆ, ಮತ್ತೆ ಪ್ರಸ್ತಾಪ ಮಾಡುತ್ತಿದ್ದಾರೆ. ದುರ್ಬಲ ವರ್ಗಗಳಿಗೆ ಮತ್ತು ಸಣ್ಣ ರೈತ ಕುಟುಂಬಗಳಿಗೆ ಅನುಕೂಲವಾಗುವಂತಹ ಯಾವುದೇ ಹೊಸ ಯೋಜನೆಗಳನ್ನು ಜಾರಿಗೆ ತಂದಿಲ್ಲ ಎಂದು ಖರ್ಗೆ ಆರೋಪಿಸಿದರು.
PublicNext
15/08/2021 10:31 pm