ಬೆಂಗಳೂರು: 'ಭಾರತದಲ್ಲೂ ತಾಲಿಬಾನ್ ಮಾದರಿ ಸಂಘಟನೆಗಳಿವೆ. ಅದು ಯಾವ ಸಂಘಟನೆಗಳು ಅನ್ನೋದನ್ನ ಮುಂದಿನ ದಿನಗಳಲ್ಲಿ ತಿಳಿಸುವೆ' ಎಂದು ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಇಂದು ಕಾಂಗ್ರೆಸ್ ಪಕ್ಷದ ರಾಜ್ಯಸಭಾ ಸದಸ್ಯ ಡಾ. ಎಲ್ ಹನುಮಂತಯ್ಯ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು ಈ ಹೇಳಿಕೆ ನೀಡಿದ್ದಾರೆ.
ಈ ಬಾರಿ ಸಂಸತ್ತಿನ ಅಧಿವೇಶನವನ್ನು ಕೇಂದ್ರ ಸರ್ಕಾರ, ಯಾವ ರೀತಿ ನಡೆಸಿದೆ ಅಂತ ದೇಶದ ಜನ ನೋಡಿದ್ದಾರೆ. ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ನಡೆದ ಘಟನೆಗಳನ್ನು ಜನ ನೋಡಿದ್ದಾರೆ. ವಿಪಕ್ಷಗಳಿಗೆ ಅನಿಸಿಕೆ ಹೇಳಲು ಅವಕಾಶ ಕೊಡಬಾರದೆಂದೇ ಚರ್ಚೆಗೆ ಕೇಂದ್ರ ಸರ್ಕಾರ ಅವಕಾಶ ಮಾಡಿಕೊಡಲಿಲ್ಲ ಎಂದು ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.
PublicNext
17/08/2021 10:10 pm