ಪ್ರತಿಭಟನಾ ನಿರತ ರೈತರ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೀಡಿರುವ ಹೇಳಿಕೆಯನ್ನು ವಾಪಸ್ ಪಡೆದು ಕ್ಷಮೆಯಾಚಿಸಬೇಕು ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಒತ್ತಾಯಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಸಾ.ರಾ.ಮಹೇಶ್, ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ಸರಿಯಾಗಿದ್ದರೆ ರೈತರಿಗೆ ಮನವರಿಕೆ ಮಾಡಿಕೊಡಬೇಕು, ಹೋರಾಟ ನಿರತ ರೈತರನ್ನು ದಲ್ಲಾಳಿಗಳು ಎಂದು ಕರೆದಿರುವುದು ಸರಿಯಲ್ಲ. ಇದು ಖಂಡನೀಯ ಎಂದರು. ಪ್ರತಿಭಟನಾ ನಿರತ ರೈತರೊಂದಿಗೆ ಸಮಾಲೋಚನೆ ನಡೆಸುವಂತೆ ಪ್ರಧಾನಿ ಮೋದಿ ಅವರಿಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಈ ಬಗ್ಗೆ ಪತ್ರ ಬರೆದಿದ್ದಾರೆ ಎಂದು ಹೇಳಿದರು.
PublicNext
18/08/2021 01:02 pm