ಮೈಸೂರು: ತಾಲಿಬಾನ್ ಉಗ್ರಗರು ಅಫ್ಘಾನಿಸ್ತಾನವನ್ನು ತಮ್ಮದಾಗಿಸಿಕೊಂಡಿರುವ ಕುರಿತು ಬಿಜೆಪಿ ಸಂಸದ ಪ್ರತಾಪ್ ಸಿಂಹ ಬುಧವಾರ ಪ್ರತಿಕ್ರಿಯೆ ನೀಡಿದ್ದಾರೆ. ಅಫ್ಘಾನ್ ಪರಿಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿ ಮೊದಲೇ ಊಹಿಸಿದ್ದರು. ಹೀಗಾಗಿಯೇ ಭಾರತದಲ್ಲಿ ಸಿಎಎ ಕಾಯ್ದೆ ಜಾರಿಗೊಳಿಸಿದರು ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಭಾರತೀಯರಿಗೆ ಸಿಎಎ ಕಾಯ್ದೆಯನ್ನು ಏಕೆ ಜಾರಿಗೆ ತರಲಾಯಿತು ಎಂಬುದು ಈಗ ಅರ್ಥವಾಗಬೇಕು. ಮೋದಿಯವರು ಪರಿಸ್ಥಿತಿಯನ್ನು ಮೊದಲೇ ಅರ್ಥ ಮಾಡಿಕೊಂಡು ಸಿಎಎ ಕಾಯ್ದೆಯನ್ನು ಜಾರಿಗೊಳಿಸಿದರು.
ಪ್ರತಿಯೊಬ್ಬ ಭಾರತೀಯರು ಇದನ್ನು ಅರ್ಥ ಮಾಡಿಕೊಳ್ಳಬೇಕು. ಇವತ್ತು ಆಫ್ಘಾನಿಸ್ತಾನದ ಸುತ್ತಮುತ್ತ ಹಲವಾರು ಮುಸ್ಲಿಂ ರಾಷ್ಟ್ರಗಳಿದ್ದರೂ ಅವರನ್ನು ಕರೆಸಿಕೊಳ್ಳುತ್ತಿಲ್ಲ. ಸಿಎಎ ಜಾರಿಗೆ ತಂದದ್ದು ಆಫ್ಘಾನಿಸ್ತಾನದ ಕಾರಣಕ್ಕಾಗಿ ಮಾತ್ರವಲ್ಲ. ಇತರ ಕಡೆಗಳಲ್ಲಿ ಈ ರೀತಿಯ ಅನಾಹುತಗಳಾಗಬಹುದು. ಎಲ್ಲರೂ ಸೇರಿ ಇದನ್ನು ಎದುರಿಸಬೇಕಾಗಿದೆ ಎಂದು ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಪರದೇಶಗಳಿಂದ ಹಿಂಸಾಚಾರಕ್ಕೆ ಸಿಲುಕಿ ಭಾರತದ ಆಶ್ರಯ ಕೇಳಿಬಂದ ಹಿಂದು, ಸಿಖ್, ಜೈನ, ಬೌದ್ಧ, ಪಾರ್ಸಿ ಮತ್ತು ಕ್ರಿಶ್ಚಿಯನ್ ಅಲ್ಪಸಂಖ್ಯಾತರಿಗೆ ಭಾರತದ ಪೌರತ್ವ ನೀಡುವ ಕಾಯ್ದೆಯೇ ಸಿಎಎ.
PublicNext
18/08/2021 04:11 pm