ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಎತ್ತಿನಹೊಳೆ ಯೋಜನೆ ಹಣ ಕೊಳ್ಳೆ ಹೊಡೆಯುವ ಕಾರ್ಯಕ್ರಮ: ಕುಮಾರಸ್ವಾಮಿ

ಕೋಲಾರ: ಮಂಡ್ಯ ಸಂಸದೆ ಸುಮಲತಾ ವಿರುದ್ಧ ಆಕ್ರೋಶಿತರಾಗಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಈ ಬಾರಿ ಅವರ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ನಿನ್ನೆ ಬುಧವಾರ ಮಂಡ್ಯ ಜಿಲ್ಲಾ ಪಂಚಾಯತಿಯಲ್ಲಿ ನಡೆದ ದಿಶಾ ಸಮಿತಿ ಸಭೆಯಲ್ಲಿ ಶಾಸಕ ಶ್ರೀಕಂಠಯ್ಯ ಹಾಗೂ ಸಂಸದೆ ಸುಮಲತಾ ನಡುವೆ ಮಾತಿನ ಸಮರ ನಡೆದಿತ್ತು. ಈ ಬಗ್ಗೆಯೂ ಪ್ರತಿಕ್ರಿಯೆ ನೀಡಲು ಕುಮಾರಸ್ವಾಮಿ ನಿರಾಕರಿಸಿದ್ದಾರೆ.

ಕೋಲಾರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಯು ಹಣ ಕೊಳ್ಳೆ ಹೊಡೆಯುವ ಕಾರ್ಯಕ್ರಮವಾಗಿದೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಎತ್ತಿನ ಹೊಳೆ ಯೋಜನೆಯಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಟಾಂಗ್ ನೀಡಿದ್ದಾರೆ. ಮೂರು ವರ್ಷಗಳಲ್ಲಿ ಎತ್ತಿನ ಹೊಳೆ ಹರಿಸುವುದಾಗಿ ಹೇಳಿದ್ದಾರೆ. ಆದರೆ 10 ವರ್ಷ ಆಗಿದೆ, ನೀರು ಬಂದಿಲ್ಲ. ರಮೇಶ್ ಕುಮಾರ್ ಅವರು ರಾಜ್ಯದಲ್ಲಿ ಯಾರೂ ಮಾಡದೇ ಇರುವ ಕೆಲಸವನ್ನು ಮಾಡಿಲ್ಲ ಎಂದಿದ್ದಾರೆ.

Edited By : Nagaraj Tulugeri
PublicNext

PublicNext

19/08/2021 07:41 am

Cinque Terre

28.58 K

Cinque Terre

3

ಸಂಬಂಧಿತ ಸುದ್ದಿ