ಬಳ್ಳಾರಿ: ರಾಜ್ಯ ಪ್ರವಾಸದಲ್ಲಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಆ.20 ಮತ್ತು 21 ರಂದು ತುಂಗಭದ್ರಾ ಡ್ಯಾಂ ಮತ್ತು ಐತಿಹಾಸಿಕ ಹಂಪಿ ಸ್ಮಾರಕಗಳ ವೀಕ್ಷಣೆಗೆ ಕುಟುಂಬ ಸಮೇತರಾಗಿ ಆಗಮಿಸುತ್ತಿದ್ದಾರೆ.
ಸುಗಮ ಪ್ರವಾಸಕ್ಕಾಗಿ ಹಂಪಿಯಲ್ಲಿ ಹಲವು ರೀತಿ ಸಿದ್ಧತೆಗಳು ನಡೆಯುತ್ತಿದ್ದು, ಅ.20 ರಂದು ಹುಬ್ಬಳ್ಳಿಯಿಂದ ಹೆಲಿಕಾಪ್ಟರ್ ಮೂಲಕ ಹೊಸಪೇಟೆಯ ತಾಲೂಕು ಕ್ರೀಡಾಂಗಣಕ್ಕೆ ಸಂಜೆ 5:20 ಕ್ಕೆ ಆಗಮಿಸುವ ಅವರು ನಂತರ ತುಂಗಭದ್ರಾ ಡ್ಯಾಂ ವೀಕ್ಷಣೆ ಮಾಡಲಿದ್ದಾರೆ.
PublicNext
19/08/2021 10:53 am