ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಮಲತಾ ಸುತ್ತ ಬರೀ..ಗೂಂಡಾಗಳು, ವಂಚಕರಿದ್ದಾರೆ : ಶಾಸಕ ರವೀಂದ್ರ ಶ್ರೀಕಂಠಯ್ಯ ಆರೋಪ

ಮಂಡ್ಯ : ಅಕ್ರಮ ಬಯಲಿಗೆಳೆಯಲು ಮುಂದಾಗಿರುವ ಸಂಸದೆ ಸುಮಲತಾ ಸುತ್ತ ಇರುವವರೆಲ್ಲ ಅಕ್ರಮದವರೇ. ಗೂಂಡಾಗಳ ರೀತಿ ವರ್ತಿಸಿ ಜನರನ್ನು ವಂಚಿಸುತ್ತಿದ್ದಾರೆ ಎಂದು ಶ್ರೀರಂಗಪಟ್ಟಣದ ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದೆ ಸುಮಲತಾ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಭಟ್ ಚೇತಕ್ ಎಂಬ ಹುಡುಗನಿಗೆ ಮೆಡಿಕಲ್ ಸೀಟು ಕೊಡಿಸುತ್ತೇನೆಂದು ಹೇಳಿ ವಂಚನೆ ಎಸಗುತ್ತಿದ್ದಾನೆ.

ಅಂತವನನ್ನು ಸುಮಲತಾ ಅವರು ಆಪ್ತ ಸಹಾಯಕನೆಂದು ಇರಿಸಿಕೊಂಡಿದ್ದಾರೆ. ಸುಮಲತಾ ಮತ್ತು ಅವರ ಸುತ್ತಮುತ್ತಲವರಿಂದ ಜಿಲ್ಲೆಯ ಅಧಿಕಾರಿಗಳಿಗೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿದರು.ಸಂಸದೆ ಸುಮಲತಾ ಮತ್ತು ಅವರ ಜೊತೆ ಕೆಲಸ ಮಾಡುವ ಆಪ್ತ ಸಹಾಯಕರು ಕಳೆದ ಎರಡು ತಿಂಗಳಿನಿಂದ ಯಾರು ಯಾರಿಗೆ ಕರೆ ಮಾಡಿದ್ದಾರೆ ಎಂದು ತನಿಖೆಯಾಗಬೇಕು.

ಈ ಎಲ್ಲಾ ಘಟನೆಗಳು ಸಂಸದೆಯ ಗಮನಕ್ಕೆ ಬಂದಿರುತ್ತದೆ. ಸುಮ್ಮನೆ ಕುಳಿತಿದ್ದಾರೆ, ಹೀಗಾಗಿ ಅವರ ವಿರುದ್ಧವೂ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಶ್ರೀಕಂಠಯ್ಯ ಆಗ್ರಹಿಸಿದ್ದಾರೆ.

Edited By : Nirmala Aralikatti
PublicNext

PublicNext

19/08/2021 11:40 am

Cinque Terre

26.82 K

Cinque Terre

1

ಸಂಬಂಧಿತ ಸುದ್ದಿ