ಬೆಂಗಳೂರು: ರಾಜ್ಯ ವಿಧಾನ ಮಂಡಲ ಅಧಿವೇಶನ ನಡೆಸಲು ರಾಜ್ಯ ಸರ್ಕಾರ ಕೊನೆಗೂ ಮುಂದಾಗಿದ್ದು, ಸೆಪ್ಟಂಬರ್ 13ರಿಂದ 24ರವರೆಗೆ ಅಧಿವೇಶನ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ. ಜೊತೆಗೆ ಬೆಂಗಳೂರಿನಲ್ಲೇ ಅಧಿವೇಶನ ನಡೆಯಲಿದೆ ಎಂದರು.
ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆದ ಬಳಿಕ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ಕಳೆದ ಜೂನ್ ತಿಂಗಳಿನಲ್ಲಯೇ ವಿಧಾನ ಮಂಡಲ ಮಳೆಗಾಲದ ಅಧಿವೇಶನ ನಡೆಯಬೇಕಿತ್ತು. ಆದರೆ ಕೊರೊನಾ ವೈರಸ್ ಸಂಕಷ್ಟದ ಹಿನ್ನೆಲೆಯಲ್ಲಿ ಸದನ ನಡೆಸದಿರಲು ಸರ್ಕಾರ ತೀರ್ಮಾನಿಸಿತ್ತು. ಹೀಗಾಗಿ ಮೂರು ತಿಂಗಳು ತಡವಾಗಿ ಮಳೆಗಾಲದ ಅಧಿವೇಶನವನ್ನು ಬೆಂಗಳೂರಿನಲ್ಲಿ ನಡೆಸಲು ರಾಜ್ಯ ಬಿಜೆಪಿ ಸರ್ಕಾರ ನಿರ್ಧಾರ ಮಾಡಿದೆ.
PublicNext
19/08/2021 04:10 pm