ಅಗರ್ತಲಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರು ಅಗರ್ತಲಾ ವಿಮಾನ ನಿಲ್ದಾಣಕ್ಕೆ ಬಂದರೆ ತಾಲಿಬಾನಿ ಶೈಲಿಯಲ್ಲಿ ದಾಳಿ ಮಾಡಬೇಕು ಎಂದು ತ್ರಿಪುರಾದ ಆಡಳಿತಾರೂಢ ಬಿಜೆಪಿ ಶಾಸಕ ಅರುಣ್ ಚಂದ್ರ ಭೌಮಿಕ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆಯ ರಾಜ್ಯ ಸಚಿವರಾದ ಪ್ರತಿಮಾ ಭೌಮಿಕ್ ಅವರಿಗೆ ಅಭಿನಂದನಾ ಸಮಾರಂಭದಲ್ಲಿ ಶಾಸಕ ಅರುಣ್ ಚಂದ್ರ ಭೌಮಿಕ್ ಈ ಹೇಳಿಕೆ ನೀಡಿದ್ದಾರೆ. 'ತಾಲಿಬಾನಿ ಶೈಲಿಯಲ್ಲಿ ನಾವು ಅವರ ಮೇಲೆ ದಾಳಿ ಮಾಡಬೇಕೆಂದು ನಾನು ನಿಮ್ಮೆಲ್ಲರಿಗೂ ಮನವಿ ಮಾಡುತ್ತೇನೆ. ಅವರು ಇಲ್ಲಿನ ವಿಮಾನ ನಿಲ್ದಾಣಕ್ಕೆ ಬಂದ ಕೂಡಲೇ ನಾವು ಅವರ ಮೇಲೆ ದಾಳಿ ನಡೆಸಬೇಕು' ಎಂದಿದ್ದಾರೆ.
ಆದರೆ ಬಿಜೆಪಿ ಘಟಕವು, "ಇದು ಕೇವಲ ಶಾಸಕರ ಅಭಿಪ್ರಾಯವಾಗಿದೆ. ಇದಕ್ಕೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ" ಎಂದು ಸ್ಪಷ್ಟನೆ ನೀಡಿದೆ. 2023ರ ತ್ರಿಪುರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸೇರಿದಂತೆ ಟಿಎಂಸಿಯ ಪ್ರಮುಖ ನಾಯಕರು, ಗುಡ್ಡಗಾಡು ರಾಜ್ಯಕ್ಕೆ ಆಗಾಗ್ಗೆ ಭೇಟಿ ನೀಡುತ್ತಿದ್ದಾರೆ. ಪಕ್ಷದ ಸಂಘಟನೆಗೆ ಪ್ರಯತ್ನಿಸುತ್ತಿದ್ದಾರೆ.
PublicNext
19/08/2021 08:29 pm