ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುತಾತ್ಮನ ಬದಲು, ಕರ್ತವ್ಯ ನಿರತ ಯೋಧನ ಕುಟುಂಬಕ್ಕೆ ಸಾಂತ್ವನ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

ಗದಗ : ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹಾಗೂ ಸ್ಥಳೀಯ ಬಿಜೆಪಿ ಮುಖಂಡರ ಮಾಹಿತಿ ಕೊರತೆಯಿಂದಾಗಿ, ಕರ್ತವ್ಯ ನಿರತ ಯೋಧನ ಮನೆಗೆ ತೆರಳುವ ಬದಲು ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಯೋಧನ ಕುಟುಂಬಕ್ಕೆ ಸಾಂತ್ವನ ಹೇಳಿರುವ ಘಟನೆ ಜಿಲ್ಲೆಯ ಮುಳಗುಂದ ಪಟ್ಟಣದಲ್ಲಿ ನಡೆದಿದೆ.

ಗುರುವಾರ ರಾತ್ರಿ ಗದಗನಲ್ಲಿ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಅವರು ಜನಾಶೀರ್ವಾದ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ವೇಳೆ ಬಿಜೆಪಿ ಸ್ಥಳೀಯ ಕಾರ್ಯಕರ್ತರ ಮಾಹಿತಿ ಕೊರತೆಯಿಂದಾಗಿ ಎಡವಟ್ಟಾಗಿದೆ.

ಒಂದೂವರೆ ವರ್ಷದ ಹಿಂದೆ ಮುಳಗುಂದ ಪಟ್ಟಣದ ಯೋಧ ಬಸವರಾಜ್ ಹಿರೇಮಠ ಮಹಾರಾಷ್ಟ್ರದ ಪುಣೆಯಲ್ಲಿ ಕರ್ತವ್ಯನಿರತರಾಗಿದ್ದ ವೇಳೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇವರ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿ, ಧೈರ್ಯ ತುಂಬವ ಬದಲು, ಸದ್ಯ ಕಾಶ್ಮೀರದಲ್ಲಿ ಕರ್ತವ್ಯದಲ್ಲಿರುವ ಯೋಧ ರವಿಕುಮಾರ್ ಹನುಮಂತಪ್ಪ ಕಟ್ಟಿಮನಿ ಅವರ ಮನೆಗೆ ಭೇಟಿ ನೀಡಿದ್ದರು.

ಕುಟುಂಬದವರ ಯೋಗಕ್ಷೇಮ ವಿಚಾರಿಸಿ, ಕರ್ತವ್ಯ ನಿರತ ಸೈನಿಕನ ಪತ್ನಿಗೆ ಸರ್ಕಾರಿ ಕೆಲಸ ಹಾಗೂ ಕುಟುಂಬಕ್ಕೆ ಜಮೀನು ಕೊಡುವ ಭರವಸೆಯನ್ನು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ನೀಡಿದ್ದರು. ಕೇಂದ್ರ ಸಚಿವರ ತರಾತುರಿ ಹೇಳಿಕೆಯಿಂದ ಹಾಲಿ ಯೋಧನ ಕುಟುಂಬಸ್ಥರು ತಬ್ಬಿಬ್ಬಾಗಿದ್ದಾರೆ. ಸ್ಥಳೀಯ ಕಾರ್ಯಕರ್ತರು ಮಾಡಿದ ಎಡವಟ್ಟಿನಿಂದ ಕೇಂದ್ರ ಸಚಿವರು ಪೇಚಿಗೆ ಸಿಲುಕಿದಂತಾಗಿದೆ.

Edited By : Nirmala Aralikatti
PublicNext

PublicNext

20/08/2021 03:55 pm

Cinque Terre

35.92 K

Cinque Terre

7

ಸಂಬಂಧಿತ ಸುದ್ದಿ