ಚಿತ್ರದುರ್ಗ: ಜಿಲ್ಲೆಯ ಹಿರಿಯೂರು " ನಗರಸಭೆಯಲ್ಲಿ ಕಾಂಗ್ರೆಸ್ ಆಡಳಿತಾರೂಢ ಪಕ್ಷ ಅಧಿಕಾರದಲ್ಲಿದ್ದು, ಅಧ್ಯಕ್ಷೆ ಹಾಗೂ ಉಪಾಧ್ಯಕ್ಷರು ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ನಗರಸಭೆಯ ಸಭಾಂಗಣವನ್ನೇ ಕಾಂಗ್ರೆಸ್ ಕಚೇರಿ ರೀತಿಯಲ್ಲಿ ದುರ್ಬಳಕೆ ಮಾಡಿಕೊಂಡು, ಕಾಂಗ್ರೆಸ್ ಪಕ್ಷದ ಕಾರ್ಯಚಟುವಟಿಕೆಗಳು ಹಾಗೂ ಕಾಂಗ್ರೆಸ್ ಸದಸ್ಯರುಗಳ ಡೀಲಿಂಗ್ ಪ್ರಕರಣಗಳಿಗೆ ಬಳಸಿಕೊಳ್ಳುತ್ತಿರುವುದು ಖಂಡನೀಯ " ಎಂದು ನಗರಸಭೆ ಹಿರಿಯ ಬಿಜೆಪಿ ಬೆಂಬಲಿತ ಸದಸ್ಯ ಎಂ.ಡಿ.ಸಣ್ಣಪ್ಪ ಗಂಭೀರ ಆರೋಪ ಮಾಡಿದ್ಧಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಅಧ್ಯಕ್ಷೆಯ ಸಹೋದರ ಅಧ್ಯಕ್ಷರ ಪರವಾಗಿ ಹಾಗೂ ಉಪಾದ್ಯಕ್ಷರುಗಳು ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರನ್ನಾ ಅವರ ವೈಯಕ್ತಿಕ ಹಿತಾಸಕ್ತಿಗೆ ಅನುಗುಣವಾಗಿ ಕಾರ್ಯನಿರ್ವಹಿಸುವಂತೆ ಒತ್ತಡ ಹೇರಿ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ " ಎಂದು ಆರೋಪಿಸಿದರು.
ಕಳೆದ ಜುಲೈ 14 ರಂದು ನಡೆದ ಸಾಮಾನ್ಯ ಸಭೆಯನ್ನು ಬಿಜೆಪಿ ಸದಸ್ಯರು ಬಹಿಷ್ಕರಿಸಿ ಹೊರ ನಡೆದಿದ್ದರು. ಈ ವಿಚಾರವಾಗಿ ಜಿಲ್ಲಾಧಿಕಾರಿಗಳು ಸಭೆಯ ನಡಾವಳಿಗಳನ್ನು ಅಮಾನತ್ತಿನಲ್ಲಿಟ್ಟು ಆದೇಶ ಹೊರಡಿಸಿದ್ದರು. ಆದೇಶ ಪ್ರತಿ ತಲುಪಿದ ಕೂಡಲೇ ಬಾಲ ಸುಟ್ಟ ಬೆಕ್ಕಿನಂತೆ ಆಗಿದ್ದಾರೆ.
ಈ ಹಿನ್ನೆಲೆಯಲ್ಲಿ ಅಧ್ಯಕ್ಷೆ , ಉಪಾಧ್ಯಕ್ಷರು ಹಾಗೂ ಕೆಲ ಕಾಂಗ್ರೆಸ್ ಸದಸ್ಯರು ನಗರಸಭೆಯ ಅಧೀಕೃತ ವಾಟ್ಸಾಪ್ ಗ್ರೂಪ್ ಗಳಲ್ಲಿ ತುರ್ತು ಸಭೆ ನಡೆಯುವ, ಈ ಸಭೆಗೆ ಕೇವಲ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯರು, ಅವರುಗಳೊಂದಿಗೆ ನಗರಸಭೆ ಪೌರಾಯುಕ್ತ ಸೇರಿ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸುವಂತೆ ತಾಕೀತು ಮಾಡಿರುವುದಲ್ಲದೇ ಈ ಸಭೆಯಲ್ಲಿ ಭಾಗವಹಿಸಲು ನಿರಾಕರಿಸಿದ ಕಮೀಷನರ್ ರವರಿಗೆ ತಮ್ಮದೇ ಆದ ಕಾಂಗ್ರೆಸ್ ಶೈಲಿಯಲ್ಲಿ ಆವಾಜ್ ಹಾಕಿರುವುದು ಅವರುಗಳ ಆಡಳಿತದ ದೌರ್ಜನ್ಯ ಕ್ಕೆ ಸಾಕ್ಷಿಯಾಗಿವೆ " ಎಂದು ಮತ್ತೊಮ್ಮೆ ಗಂಭೀರವಾಗಿ ಆರೋಪಿಸಿದರು.
PublicNext
20/08/2021 04:00 pm