ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

2024 ಚುನಾವಣೆ : ನಂಬಿಕೆಯುಳ್ಳ ಸರ್ಕಾರ ರಚನೆಯೇ ನಮ್ಮ ಗುರಿ, ಸೋನಿಯಾ ಗಾಂಧಿ

ನವದೆಹಲಿ: 2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಗಾಗಿ ವ್ಯವಸ್ಥಿತವಾಗಿ ಸಿದ್ಧತೆ ಆರಂಭಿಸಬೇಕು ಎಂದು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾಗಾಂಧಿ ಹೇಳಿದ್ದಾರೆ. 19 ವಿರೋಧ ಪಕ್ಷಗಳ ಮುಖಂಡರೊಂದಿಗೆ ಶುಕ್ರವಾರ ನಡೆಸಿದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು, 'ಸಂವಿಧಾನದ ಆಶಯ-ತತ್ವಗಳಲ್ಲಿ ನಂಬಿಕೆ ಹೊಂದಿರುವಂತಹ ಸರ್ಕಾರ ರಚನೆಯೇ ನಮ್ಮ ಗುರಿಯಾಗಿರಬೇಕು. ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಿ, ಸರ್ಕಾರ ರಚಿಸುವುದು ಸವಾಲೇ ಆದರೂ ನಾವೆಲ್ಲಾ ಒಗ್ಗಟ್ಟಿನಿಂದ ಹೋರಾಡಿದರೆ ಇದನ್ನು ಸಾಧಿಸಬಹುದು.

ನಮಗೆ ನಮ್ಮವೇ ಆದ ಬಾಧ್ಯತೆಗಳು, ಮಿತಿಗಳು ಇವೆ. ಆದರೆ, ರಾಷ್ಟ್ರದ ಹಿತದೃಷ್ಟಿಯಿಂದ ನಾವೆಲ್ಲಾ ಇಂತಹ ಮಿತಿಗಳನ್ನು ಮೀರಿ ಒಂದುಗೂಡುವುದು ಅಗತ್ಯವಿದೆ. ಅಂಥ ಸಮಯ ಈಗ ಬಂದಿದೆ ಎಂದು ಹೇಳಿದರು.

ಈ ಮಹತ್ವದ ಸಭೆಯಲ್ಲಿ ಎನ್ ಸಿಪಿ ವರಿಷ್ಠ ಶರದ್ ಪವಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಪಾಲ್ಗೊಂಡಿದ್ದರು. ಅಲ್ಲದೆ ಜೆಎಂಎಂ, ಸಿಪಿಐ, ಸಿಪಿಎಂ, ಎನ್ ಸಿ, ಆರ್ ಜೆಡಿ, ಎಐಯುಡಿಎಫ್, ವಿಸಿಕೆ, ಎಲ್ ಜೆಡಿ, ಜೆಡಿಎಸ್, ಆರ್ ಎಲ್ ಡಿ, ಆರ್ ಎಸ್ ಪಿ, ಕೇರಳ ಕಾಂಗ್ರೆಸ್ (ಮಣಿ), ಪಿಡಿಪಿ ಹಾಗೂ ಐಯುಎಂಎಲ್ ಮುಖಂಡರು ಸಹ ಸಭೆಯಲ್ಲಿ ಭಾಗವಹಿಸಿದ್ದರು.

ಆದರೆ ಎಎಪಿ, ಬಿಎಸ್ ಪಿ ಹಾಗೂ ಸಮಾಜವಾದಿ ಪಾರ್ಟಿ ಮುಖಂಡರು ಪಾಲ್ಗೊಂಡಿರಲಿಲ್ಲ.

Edited By : Nirmala Aralikatti
PublicNext

PublicNext

21/08/2021 11:15 am

Cinque Terre

36.8 K

Cinque Terre

12

ಸಂಬಂಧಿತ ಸುದ್ದಿ