ಲಕ್ನೋ: ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶ ಮಾಜಿ ಸಿಎಂ, ರಾಜಸ್ಥಾನದ ಮಾಜಿ ರಾಜ್ಯಪಾಲ ಕಲ್ಯಾಣ್ ಸಿಂಗ್ (89) ಇಂದು ಇಹಲೋಕ ತ್ಯಜಿಸಿದ್ದಾರೆ.
ಎರಡು ಬಾರಿ ಉತ್ತರ ಪ್ರದೇಶ ರಾಜ್ಯದ ಮುಖ್ಯಮಂತ್ರಿಯಾಗಿ ಕಲ್ಯಾಣ್ ಸಿಂಗ್ ಸೇವೆ ಸಲ್ಲಿಸಿದ್ದರು. ಕಲ್ಯಾಣ್ ಸಿಂಗ್ ಅವರ ದೇಹ ಇದ್ದಕ್ಕಿದ್ದಂತೆ ಊದಿಕೊಂಡು, ಪ್ರಜ್ಞಾ ಹೀನರಾದ ಹಿನ್ನೆಲೆಯಲ್ಲಿ ಜುಲೈ 4ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯದ ಬಗ್ಗೆ ತಜ್ಞ ವೈದ್ಯರ ತಂಡ ನಿರಂತರವಾಗಿ ಗಮನ ಹರಿಸುತ್ತಿತ್ತು. ಕಾರ್ಡಿಯಾಲಜಿ, ನೆಫ್ರಾಲಜಿ, ನ್ಯೂರಾಲಜಿ, ಎಂಡೋಕ್ರಿನಾಲಜಿ ವೈದ್ಯರು ಸಿಂಗ್ ಅವರ ಆರೋಗ್ಯದ ಬಗ್ಗೆ ಹೆಚ್ಚಿನ ನಿಗಾ ಇಟ್ಟಿದ್ದರು. ಆನಂತರ ಮೂತ್ರ ವಿಸರ್ಜನೆಯಾಗದ ಹಿನ್ನೆಲೆಯಲ್ಲಿ ಡಯಾಲಿಸಿಸ್ನಲ್ಲಿ ಇರಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಕಲ್ಯಾಣ್ ಸಿಂಗ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ.
PublicNext
21/08/2021 11:15 pm