ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿದೇಶ ಪ್ರವಾಸದಿಂದ ಬಿಎಸ್‌ವೈ ವಾಪಸ್: ರಾಜ್ಯಾದ್ಯಂತ ಪ್ರವಾಸಕ್ಕೆ ಪ್ಲ್ಯಾನ್

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ವಿಶ್ರಾಂತಿ ಬಯಸಿದ್ದ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರು ಕಳೆದ ವಾರ ಕುಟುಂಬದೊಂದಿಗೆ ವಿದೇಶ ಪ್ರವಾಸ ಕೈಗೊಂಡಿದ್ದರು.

ಮಾಲ್ಡೀವ್ಸ್ ಪ್ರವಾಸದಿಂದ ವಾಪಸ್ ಆಗಿರುವ ಬಿ.ಎಸ್. ಯಡಿಯೂರಪ್ಪ ಅವರು, "ಮುಂದಿನ 20-25 ದಿನಗಳ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡಿ ಎಲ್ಲಾ ಜಿಲ್ಲೆಗಳಲ್ಲೂ ಬಿಜೆಪಿ ಪಕ್ಷವನ್ನು ಮತ್ತಷ್ಟು ಬಲಿಷ್ಠಗೊಳಿಸಲಿದ್ದೇನೆ" ಎಂದು ತಿಳಿಸಿದ್ದಾರೆ.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ಇನ್ನೂ 20- 25 ದಿನಗಳ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡಲಿದ್ದೇನೆ. ಜಿಲ್ಲಾವಾರು ಭೇಟಿ ನೀಡಿ ಕಾರ್ಯಕರ್ತರ ಜೊತೆ ಸಭೆ ಮಾಡುತ್ತೇನೆ. ಒಂದು ಜಿಲ್ಲೆಗೆ ಒಂದು ದಿನ ಹೋಗುತ್ತೇನೆ. ಬಹಳ ವರ್ಷಗಳ ಬಳಿಕ ನಾನು ವಿದೇಶ ಪ್ರವಾಸ ಹೋಗಿದ್ದೆ. ಸ್ನೇಹಿತರು, ಕುಟುಂಬಸ್ಥರ ಒತ್ತಾಯದ ಮೇರೆಗೆ ಹೋಗಿದ್ದೆ. ಮಾಲ್ಡೀವ್ಸ್ ಒಳ್ಳೆಯ ಸ್ಥಳ, ಎಲ್ಲರೂ ನೋಡುವಂತದ್ದು, ನಾನು ಸಹ ಐದು ದಿನ ಎಲ್ಲಾ ರಾಜಕೀಯ ಮರೆತು ಖುಷಿಯಾಗಿದ್ದೆ" ಎಂದು ತಿಳಿಸಿದ್ದಾರೆ.

Edited By : Vijay Kumar
PublicNext

PublicNext

24/08/2021 07:44 am

Cinque Terre

42.42 K

Cinque Terre

2

ಸಂಬಂಧಿತ ಸುದ್ದಿ