ಹಾವೇರಿ: ನನ್ನ ಜೀವನದ ಕೊನೆಯ ಹೋರಾಟ 2023ರ ಚುನಾವಣೆ. ಹೀಗಾಗಿ ಯಾರ ಹಂಗಿನಲ್ಲಿರದ ಸರ್ಕಾರ ಕೊಡಿ ಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿಕೊಂಡಿದ್ದಾರೆ.
ಹಿರೇಕೆರೂರು ಪಟ್ಟಣದ ಸರ್ವಜ್ಞ ವೃತ್ತದ ಬಳಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ಕರ್ನಾಟಕದ ಆಡಳಿತ ಕನ್ನಡಿಗರಿಂದಲೇ ಎಂಬ ಹೊಸ ಅಧ್ಯಾಯ ಪ್ರಾರಂಭ ಮಾಡೋಣ. ಮುಖ್ಯಮಂತ್ರಿ ಮಾಡಿ ಅಂತ ನಾನು ಕೇಳಲ್ಲ. ನಿಮ್ಮ ಬದುಕು ಸರಿಪಡಿಸಲು ಪೂರ್ಣ ಸರ್ಕಾರ ಕೊಡಿ. ಯಾರ ಹಂಗಿನಲ್ಲೂ ಇರದ ಸರ್ಕಾರ ಕೊಡಿ" ಎಂದು ಜನರಲ್ಲಿ ಕೇಳಿಕೊಂಡರು.
ಕೇಂದ್ರದ ಮುಂದೆ ನಾನೇನು ಅರ್ಜಿ ಹಿಡಿದುಕೊಂಡು ಹೋಗಲ್ಲ. ಕಮಿಷನ್ ತಿನ್ನುವುದು ಈಗ ನಡೆಯುತ್ತಿರುವುದು, ಎಲ್ಲದನ್ನೂ ಕಟ್ ಮಾಡುತ್ತೇನೆ. ಹಾವೇರಿ ಜಿಲ್ಲೆಯವರೇ ಈಗ ಸಿಎಂ ಆಗಿದ್ದಾರೆ. ಮುಂದಿನ ಎರಡು ವರ್ಷ ಏನ್ ಮಾಡುತ್ತಾರೆ ನೋಡೋಣ. ಇದು ನನ್ನ ಜೀವನದ ಕೊನೆಯ ಹೋರಾಟ 2023ರ ಚುನಾವಣೆ. ಕೋವಿಡ್ ಕಡಿಮೆ ಆದ ಮೇಲೆ ಜನರ ನಡುವೆ ಬರುತ್ತೇನೆ. ಹಿರೇಕೇರೂರು ಮಹಾನ್ ಅಭಿವೃದ್ಧಿ ಆಗಿ ಬಿಡ್ತಾ? ರಾಜೀನಾಮೆ ಕೊಟ್ಟು ನನ್ನ ಸರ್ಕಾರ ತೆಗೆದ್ರಲ್ಲಾ? ಹೊಸದಾಗಿ ಏನೂ ಅಭಿವೃದ್ದಿ ಆಗಿಲ್ಲ. ನಾನಿದ್ದಾಗ ಕೊಟ್ಟ ಅನುದಾನವೇ ಈಗಲೂ ನಡೆದಿದೆ ಎಂದು ಸಚಿವ ಬಿ.ಸಿ ಪಾಟೀಲ್ ವಿರುದ್ಧ ವಾಗ್ದಾಳಿ ನಡೆಸಿದರು.
PublicNext
24/08/2021 08:24 am