ಬೆಂಗಳೂರು: ನಾನು ರಾಜೀನಾಮೆ ಕೊಡ್ತೀನಿ ಎಂದು ಪಟ್ಟು ಹಿಡಿದಿದ್ದ ಸಚಿವ ಆನಂದ್ ಸಿಂಗ್ ಇಂದು ಒಮ್ಮಿಂದೊಮ್ಮೆಲೇ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾಗಿ ಹೇಳಿದ್ದಾರೆ. ಆನಂದ್ ಸಿಂಗ್ ಅವರನ್ನು ಮನವೊಲಿಸಲು ಸಿಎಂ ಬಸವರಾಜ್ ಬೊಮ್ಮಾಯಿ ಪ್ರಯತ್ನದಲ್ಲಿದ್ದಾರೆ. ಹಾಗೂ ದೆಹಲಿಗೆ ಹೋಗಿ ಬರುವ ತನಕ ಸುಮ್ಮನಿರಿ ಎಂದಿದ್ದಾರೆ.
ಬಸವರಾಜ್ ಬೊಮ್ಮಾಯಿ ಕ್ಯಾಬಿನೆಟ್ ನಲ್ಲಿ ಆನಂದ್ ಸಿಂಗ್ ಅವರಿಗೆ ಪ್ರವಾಸೋದ್ಯಮ, ಜೀವಶಾಸ್ತ್ರ ಹಾಗೂ ಪರಿಸರ ಖಾತೆಯನ್ನು ನೀಡಲಾಗಿದೆ. ಆದರೆ ಈ ಖಾತೆಯಿಂದ ಆನಂದ್ ಅಸಮಾಧಾನಗೊಂಡಿದ್ದು, ಈ ಹಿಂದೆಯೂ ರಾಜೀನಾಮೆಯ ಎಚ್ಚರಿಕೆ ನೀಡಿದ್ದರು. ಯಡಿಯೂರಪ್ಪ ಸರ್ಕಾರದ ವೇಳೆಯೂ ಎರಡು ದಿನದಲ್ಲಿ ಮೂರು ಖಾತೆ ಬದಲಾಯಿಸಿದ್ದರು. ಇದು ಅವಮಾನ ಅಲ್ಲ ಆದರೆ ನಿರಾಸೆ ಮಾಡಿರೋದಕ್ಕೆ ಸಾಕಷ್ಟು ಬೇಸರವಾಗಿದೆ. ಕೇಳಿದ ಖಾತೆ ಕೊಡದೇ ಇದ್ದರೆ ಶಾಸಕನಾಗಿ ಉಳಿಯುವುದು ಒಳಿತು ಎನ್ನುವದು ನನ್ನ ನಿಲುವು. ಮತ್ತೊಮ್ಮೆ ಸಿಎಂಗೆ ಮನವಿ ಮಾಡುತ್ತೇನೆ ಕೊಡದೆ ಇದ್ದರೆ ನನ್ನ ದಾರಿ ನಾನು ನೋಡಿಕೊಳ್ಳುತ್ತೇನೆ ಎಂದು ವಾರ್ನಿಂಗ್ ಕೊಟ್ಟಿದ್ದರು.
PublicNext
24/08/2021 02:29 pm