ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಎಂ ಆದೇಶದಂತೆ ನನ್ನ ಖಾತೆಯನ್ನು ನಿಭಾಯಿಸುವೆ: ಆನಂದ್ ಸಿಂಗ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಆದೇಶದಂತೆ ನನ್ನ ಖಾತೆಯನ್ನು ನಿಭಾಯಿಸುವೆ ಎಂದು ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ಬೊಮ್ಮಾಯಿ ಅವರನ್ನು ಆನಂದ್ ಸಿಂಗ್ ಭೇಟಿಯಾದರು. ಬಳಿಕ ಮಾತನಾಡಿದ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, "ಸಿಎಂ ಬೊಮ್ಮಾಯಿ ಅವರು ನಾಳೆ ಸಂಜೆ ದೆಹಲಿಗೆ ಪ್ರಯಾಣ ಬೆಳಸಲಿದ್ದು, ಹೈಕಮಾಂಡ್ ನಾಯಕರ ಭೇಟಿ ಬಳಿಕ ಎಲ್ಲವನ್ನೂ ಸರಿ ಮಾಡುವ ಭರವಸೆ ನೀಡಿದ್ದಾರೆ. ಹೀಗಾಗಿ ಮೊದಲು ಕೊಟ್ಟಿರುವ ಖಾತೆಯನ್ನು ನಿಭಾಯಿಸಿವಂತೆ ಸಿಎಂ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ" ಎಂದು ತಿಳಿಸಿದರು.

ಸಿಎಂ ಆದೇಶದಂತೆ ನಾನು ಇಂದು ಕೆಲಸಕ್ಕೆ ಬಂದಿದ್ದೇನೆ. ನನ್ನ ಖಾತೆಯನ್ನು ನಿಭಾಯಿಸುತ್ತೇನೆ. ಈ ಹಿಂದೆ ಸಲ್ಲಿಸಿದ್ದ ಮನವಿಯನ್ನು ಸಲ್ಲಿಸಿದ್ದೇನೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ನನ್ನನ್ನು ಪರಿಗಣಿಸುವುದಾಗಿ ಹೇಳಿದ್ದಾರೆ ಎಂದರು.

Edited By : Vijay Kumar
PublicNext

PublicNext

24/08/2021 03:54 pm

Cinque Terre

36.08 K

Cinque Terre

3

ಸಂಬಂಧಿತ ಸುದ್ದಿ