ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ನ ಲ್ಲಿ ಪ್ರಮೋಷನ್ ಸಿಗಬೇಕೆಂದರೆ ಭ್ರಷ್ಟಾಚಾರ ಮಾಡಬೇಕು, ಜೈಲಿಗೆ ಹೋಗಬೇಕು ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಈಗ ನಿರಪರಾಧಿಯೂ ಅಲ್ಲ, ಅಪರಾಧಿಯೂ ಅಲ್ಲ, ಅವರು ಆಪಾದಿತ. ಭ್ರಷ್ಟಾಚಾರದ ಕಾಂಗ್ರೆಸ್ ನ ರಾಜಕೀಯ ವ್ಯವಸ್ಥೆಯ ಒಂದು ಭಾಗ. ಅಲ್ಲಿ ಗುಂಡಾಗಿರಿ ಪ್ರಮೋಷನ್ ಗೆ ಇರುವ ಒಂದು ಮಾದರಿ ಎಂದರು.
ಡಿಕೆ ಶಿವಕುಮಾರ್ ಅವರು ಬೆಳೆದ ಬಂದ ರೀತಿಯಲ್ಲೇ ಆಲೋಚನೆ ಮಾಡುತ್ತಿದ್ದಾರೆ. ಹಿಂದೆ ರಾಜೀವ್ ಗಾಂಧಿ ಅವರು ತನ್ನ ಮೇಲೆ ಗೂಂಡಾ ಅಂತ ಬಂದಾಗ ಗೂಂಡಾಗಳಿಗೆ ನಾವು ವಿಶೇಷವಾದ ಆದ್ಯತೆ ಕೊಡಬೇಕೆಂದು ಅವರೇ ಹೇಳಿದ್ದಾರೆ. ಅದನ್ನ ಅವರೇ ಒಪ್ಪಿದ್ದಾರೆ, ಮುಂದೆ ಜನ ಕಾಂಗ್ರೆಸ್ ಬಗ್ಗೆ ಎಚ್ಚರ ವಹಿಸಬೇಕಿದೆ.
ಉಳಿದವರು ಕಾಂಗ್ರೆಸ್ ಬಗ್ಗೆ ಯೋಚನೆ ಮಾಡಬೇಕಾಗಿದೆ ಎಂದರು.
PublicNext
24/08/2021 04:14 pm