ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆಗೆ ಕಪಾಳ ಮೋಕ್ಷ ಮಾಡಬೇಕು ಎಂಬ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ನಾರಾಯಣ ರಾಣೆ ಅವರನ್ನು ಅರೆಸ್ಟ್ ಮಾಡಲಾಗಿದೆ. ಬಂಧಿಸುವ ವೇಳೆ ಅವರು ಊಟಕ್ಕೆ ಕುಳಿತಿದ್ದರು ಎನ್ನಲಾಗಿದೆ. ಇದಕ್ಕೆ ಸಂಬಂಧಿಸಿದ ವಿಡಿಯೋವನ್ನು ಮಹಾರಾಷ್ಟ್ರ ಬಿಜೆಪಿ ರಿಲೀಸ್ ಮಾಡಿದೆ.
ನಾರಾಯಣ ರಾಣೆ ಅವರನ್ನು ಬಂಧಿಸಲು ಪೊಲೀಸರು ಬಂದಾಗ ಅಲ್ಲಿದ್ದ ಕಾರ್ಯಕರ್ತರು ಅದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರ ವಿರೋಧದ ನಡುವೆಯೂ ಪೊಲೀಸರು ತಮ್ಮ ಕರ್ತವ್ಯ ನಿಭಾಯಿಸಿದ್ದಾರೆ.
PublicNext
24/08/2021 06:48 pm