ಮುಂಬೈ: ಅಪರಿಚಿತ ದುಷ್ಕರ್ಮಿಗಳು ಮಹಾರಾಷ್ಟ್ರದ ಸಿಂಧ್ ದುರ್ಗ ಜಿಲ್ಲೆಯ ಮಾಳವನ್ ನಲ್ಲಿರುವ ಶಿವಸೇನಾ ಸಂಸದ ವಿನಾಯಕ್ ರಾವತ್ ಅವರ ಬಂಗಲೆ ಮೇಲೆ ಸೋಡಾ ಬಾಟಲಿಗಳನ್ನು ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈಯಿಂದ 500 ಕಿಲೋ ಮೀಟರ್ ದೂರದಲ್ಲಿರುವ ಮಾಳವನ್ ನ ಕರಾವಳಿ ಪ್ರದೇಶ ರೌತವಾಡಿಯಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಹೇಳಿಕೆ ಕುರಿತಾಗಿ ಕೇಂದ್ರ ಸಚಿವ ನಾರಾಯಣ್ ರಾಣೆ ಅವರನ್ನು ಕೇಂದ್ರ ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ರಾವತ್ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು. ಆದಾದ ಬಳಿಕ ಈ ಘಟನೆ ನಡೆದಿದೆ.
PublicNext
25/08/2021 12:19 pm