ಮೈಸೂರು: ಮೈಸೂರು ಮಹಾನಗರ ಪಾಲಿಕೆ ಇತಿಹಾಸದಲ್ಲಿ ಮೊದಲ ಬಾರಿಗೆ ಬಿಜೆಪಿಗೆ ಮೇಯರ್ ಪಟ್ಟಕ್ಕೇರಿದೆ.
ಮೈಸೂರು ಪಾಲಿಕೆ ಮೇಯರ್ ಪಟ್ಟ ಬಿಜೆಪಿ ಸದಸ್ಯೆ ಸುನಂದಾ ಪಾಲನೇತ್ರ ಅವರಿಗೆ ಲಭಿಸಿದ್ದು, ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಸುನಂದಾ ಪಾಲನೇತ್ರ ಬಿ.ಎಸ್ ಯಡಿಯೂರಪ್ಪ ಸಂಬಂಧಿಯಾಗಿದ್ದಾರೆ. ಚುನಾವಣೆಯಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಪರ ಮತದಾನ ಮಾಡಿದ ಕಾಂಗ್ರೆಸ್ ಸದಸ್ಯರು ಬಳಿಕ ಸಭಾ ತ್ಯಾಗ ಮಾಡಿ, ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಆರೋಪಿಸಿದರು.
ಬಿಜೆಪಿ ಅಭ್ಯರ್ಥಿ ಸುನಂದಾ ಪಾಲನೇತ್ರ ಪರ 26 ಮತಗಳು ಲಭಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಶಾಂತಕುಮಾರಿ ಪರ 22 ಮತ ಚಲಾವಣೆಯಾಗಿದೆ. ಕಳೆದ ಬಾರಿ ಮೇಯರ್ ಎಲೆಕ್ಷನ್ ವೇಳೆಯೂ ಬಿಜೆಪಿಯಿಂದ ಸುನಂದಾ ಪಾಲನೇತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ಇನ್ನು ಬಿಜೆಪಿಯೂ ಈವರೆಗೆ ಒಮ್ಮೆಯೂ ಮೈಸೂರು ಮಹಾನಗರ ಪಾಲಿಕೆಯ ಗದ್ದುಗೆ ಏರಿರಲಿಲ್ಲ. ಆದರೆ ಅದೃಷ್ಟವಶಾತ್ ಮೊದಲ ಬಾರಿಗೆ ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ಬಿಜೆಪಿಗೆ ಲಭಿಸಿದೆ. ಸುನಂದಾ ಪಾಲನೇತ್ರ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
PublicNext
25/08/2021 12:56 pm