ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಧಿವೇಶನದಲ್ಲಿ 'ಇಂದಿರಾ ಕ್ಯಾಂಟೀನ್ ಮರುನಾಮಕರಣ' ಚರ್ಚೆ.?

ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳಿಗೆ ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಮರುನಾಮಕರಣ ಮಾಡುವುದಕ್ಕೆ ರಾಜ್ಯ ಬಿಜೆಪಿ ಸರ್ಕಾರ ಸರ್ವಪ್ರಯತ್ನ ನಡೆದಿದೆ. ಹೀಗಾಗಿ ಮುಂದಿನ ತಿಂಗಳು 10 ದಿನಗಳ ಕಾಲ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲೂ ಈ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಬಿಜೆಪಿಯು 2018ರ ಚುನಾವಣಾ ಪ್ರಣಾಳಿಕೆಯಲ್ಲಿ ಇಂದಿರಾ ಕ್ಯಾಂಟೀನ್ ಮರುನಾಮಕರಣ ಮಾಡುವುದಾಗಿ ಹೇಳಲಾಗಿತ್ತು. ಅಲ್ಲದೆ, ಸೆಪ್ಟೆಂಬರ್ 13 ರಂದು ನಡೆಯಲಿರುವ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಈ ಕುರಿತು ಪ್ರಸ್ತಾಪ ಮಾಡುವುದಾಗಿ ತಿಳಿಸಿದ್ದರು. ರಾಜ್ಯ ಬಿಜೆಪಿ ನಾಯಕ ಸಿ.ಟಿ. ರವಿ ಕೂಡ ಇದಕ್ಕೆ ಪಟ್ಟು ಹಿಡಿದಿದ್ದಾರೆ.

ಆದರೆ ಸಚಿವ ಆರ್.ಅಶೋಕ್ ಅವರು ಮಾತನಾಡಿ, "ಇಂದಿರಾ ಕ್ಯಾಂಟೀನ್‌ ಮರುನಾಮಕರಣ ಸಂಬಂಧ ಯಾವುದೇ ಪ್ರಸ್ತಾಪಗಳು ಸರ್ಕಾರದ ಮುಂದೆ ಇಲ್ಲ. ಆದರೆ ಶಾಸಕರು ಅಧಿವೇಶನದಲ್ಲಿ ಈ ಕುರಿತ ವಿಚಾರವನ್ನು ಪ್ರಸ್ತಾಪಿಸಿದ್ದೇ ಆದರೆ ಚರ್ಚೆ ನಡೆಸಲಾಗುತ್ತದೆ" ಎಂದು ಹೇಳಿದ್ದಾರೆ. ಹೀಗಾಗಿ ಕಾಂಟೀನ್ ವಿಚಾರ ವಿವಾದಾತ್ಮಕವಾಗಿರುವುದರಿಂದ ಅಧಿವೇಶನದಲ್ಲಿ ಚರ್ಚೆ ನಡೆಯುವುದು ಅನುಮಾನ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

Edited By : Vijay Kumar
PublicNext

PublicNext

26/08/2021 01:48 pm

Cinque Terre

30.03 K

Cinque Terre

2

ಸಂಬಂಧಿತ ಸುದ್ದಿ