ಬೆಂಗಳೂರು: ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ವಿಚಾರವಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ನಿನ್ನೆ ಗುರುವಾರ ಅಸಂಬದ್ಧ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸಮರ್ಥನೆ ನೀಡಿದ್ದಾರೆ. 'ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ನೆಗೆಟಿವ್ ಆಗಿ ಆ ಹೇಳಿಕೆ ಕೊಟ್ಟಿದ್ದಲ್ಲ. ಮಹಿಳೆಯರ ಬಗ್ಗೆ ಕಾಳಜಿಯಿಂದ ಆ ಹೇಳಿಕೆ ಕೊಟ್ಟಿದ್ದಾರೆ' ಎಂದು ಗೃಹ ಸಚಿವರ ಪರವಾಗಿ ಬ್ಯಾಟ್ ಮಾಡಿದ್ದಾರೆ.
ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಕುರಿತಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರ, ಪೊಲೀಸ್ ಇಲಾಖೆ ದಕ್ಷತೆಯಿಂದ ಕೆಲಸ ಮಾಡುತ್ತಿದೆ. ಅಪರಾಧಿಗಳು ಖಂಡಿತಾ ಸಿಕ್ಕಿಹಾಕಿಕೊಳ್ಳುತ್ತಾರೆ. ದುರ್ದೈವ ಅಂದರೆ, ಹೆಣ್ಣು ಮಕ್ಕಳ ವಿಚಾರದಲ್ಲಿ ಅತ್ಯಾಚಾರಗಳು ಮರುಕಳಿಸುತ್ತಿದೆ. ಕಠಿಣ ಕಾನೂನುಗಳಾಗಿವೆ, ಇನ್ನೂ ಸ್ವಲ್ಪ ಹೆಚ್ಚಿನ ಕಠಿಣ ಕಾನೂನುಗಳು ಬರಬೇಕಿದೆ ಆಗ ಮಾತ್ರ ಕಾಮುಕರು ಎಚ್ಚೆತ್ತುಕೊಳ್ಳುತ್ತಾರೆ ಎಂದಿದ್ದಾರೆ.
PublicNext
27/08/2021 04:10 pm