ಮಂಗಳೂರು: ವಿಧಾನಸಭೆಯ ಅಧಿವೇಶನವು ಸೆ.13 ರಿಂದ 24 ರವರೆಗೆ ನಡೆಸಲು ಆದೇಶ ಹೊರಡಿಸಲಾಗಿದ್ದು ಸಚಿವರು, ಶಾಸಕರು ಹಾಗೂ ಅಧಿಕಾರಿ ವರ್ಗ ಎಲ್ಲರೂ ಕಡ್ಡಾಯವಾಗಿ ಹಾಜರಿರಬೇಕು. ಯಾರೂ ಕೂಡ ಈ ಅವಧಿಯಲ್ಲಿ ರಜೆ ಕೇಳುವಂತಿಲ್ಲ ಎಂದು ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಮಾತನಾಡಿದ ಅವರು, 6 ತಿಂಗಳ ಬಳಿಕ ಅಧಿವೇಶನ ನಡೆಯುತ್ತಿದ್ದು, ಇದನ್ನು ಈಗಾಗಲೇ ಎಲ್ಲರಿಗೂ ಪತ್ರ ಮುಖೇನ ತಿಳಿಸಿಲಾಗಿದೆ. ಅದರಂತೆ ಎಲ್ಲರೂ 10 ದಿನಗಳ ಕಾಲ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಹೇಳಿದರು.
ಮೈಸೂರು ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇದು ಎಲ್ಲರೂ ತಲೆತಗ್ಗಿಸುವ ಘಟನೆ. ಇದನ್ನು ಯಾರೂ ನಿರೀಕ್ಷಿಸಿರಲಿಲ್ಲ. ಸರಕಾರ ಈ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಜನರ ಅಪೇಕ್ಷೆಗೆ ತಕ್ಕಂತೆ ಸರಕಾರ ಕಾರ್ಯನಿರ್ವಹಿಸಬಹುದು ಎಂದು ನಂಬಿದ್ದೇನೆ ಎಂದು ಹೇಳಿದರು. ಶಾಸಕರ ಪ್ರದೇಶಾಭಿವೃದ್ದಿ ಯೋಜನೆಯಡಿ ಅಗತ್ಯ ಕಾಮಗಾರಿಗಳನ್ನು ನಿರ್ವಹಿಸಲು ಎಲ್ಲಾ ಶಾಸಕರು ಹಾಗೂ ಅಧಿಕಾರಿಗಳು ಸಂಪೂರ್ಣವಾಗಿ ಜವಬ್ದಾರರಾಗಿರುತ್ತಾರೆ. ರಾಜ್ಯದಲ್ಲಿ ಅಂದಾಜು 1 ಸಾವಿರ ಕೋಟಿ ರೂ. ಕಾಮಗಾರಿಗಳಿಂದಾಗಿ ಬಾಕಿ ಉಳಿದಿದೆ. ಈ ಉಳಿಕೆ ಹಣ ಜಿಲ್ಲಾಧಿಕಾರಿ ಹಾಗೂ ಸಹಾಯಕ ಆಯುಕ್ತರಿಗೆ ಸೇರಿದ ವಿವಿಧ ಪಿಡಿ ಖಾತೆಗಳಲ್ಲಿವೆ ಎಂದು ಹೇಳಿದರು.
PublicNext
27/08/2021 10:32 pm