ದಾವಣಗೆರೆ: ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುವುದನ್ನು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಿಲ್ಲಿಸದಿದ್ದರೆ ಕಾಂಗ್ರೆಸ್ ಉಗ್ರ ಹೋರಾಟ ನಡೆಸಲಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್. ಬಿ. ಮಂಜಪ್ಪ ಎಚ್ಚರಿಕೆ ನೀಡಿದ್ದಾರೆ.
ರಾಹುಲ್ ಗಾಂಧಿ, ಸಿದ್ದರಾಮಯ್ಯ, ಡಿ. ಕೆ. ಶಿವಕುಮಾರ್ ಬಗ್ಗೆ ಅವಹೇಳನಕಾರಿಯಾಗಿ ಯತ್ನಾಳ್ ಮಾತಾಡ್ತಿದ್ದಾರೆ. ಇದು ಮುಂದುವರಿದರೆ ಯತ್ನಾಳ್ ಎಲ್ಲಿರುತ್ತಾರೋ ಅಲ್ಲಿಗೆ ಹೋಗಿ ಪ್ರತಿಭಟನೆಯನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಲಿದ್ದಾರೆ ಎಂದು ಹೇಳಿದರು.
ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ದೊಂಬರಾಟ ರಾಜಕಾರಣ ಮಾಡ್ತಿದ್ದಾರೆ. ಕಾರ್ಮಿಕರಿಗೆ ನೀಡಬೇಕಿದ್ದ ಆಹಾರ ಕಿಟ್ ವಿತರಣೆ ಮಾಡಿಲ್ಲ. ಎಲ್ಲದರಲ್ಲಿಯೂ ಹಸ್ತಕ್ಷೇಪ ಮಾಡ್ತಾರೆ. ದೆಹಲಿಯಲ್ಲಿ ಮಂತ್ರಿಗಿರಿಗಾಗಿ ಲಾಬಿ ನಡೆಸಲು ಹದಿನೈದು ದಿನಗಳ ಕಾಲ ಹೋಗ್ತಾರೆ. ತಾವು ಬಾರದೇ ಯಾವುದನ್ನು ವಿತರಣೆ ಮಾಡಬಾರದು ಎಂಬ ಸೂಚನೆಗಳನ್ನು ರೇಣುಕಾಚಾರ್ಯ ನೀಡಿದ್ದಾರೆ. ಹಾಗಾಗಿ ವಿತರಣೆ ಮಾಡಿಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ. ಜನರ ಸಮಸ್ಯೆಗೆ ಸ್ಪಂದಿಸದೇ ಸ್ಟಂಟ್ ಮಾಡುವ ರೇಣುಕಾಚಾರ್ಯ ಅವರಿಗೆ ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.
PublicNext
28/08/2021 10:30 pm