ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಒಡಕೂ ಇಲ್ಲ, ಭಿನ್ನಾಭಿಪ್ರಾಯವೂ ಇಲ್ಲ: ನಾವೆಲ್ಲರೂ ಒಟ್ಟಾಗಿದ್ದೇವೆ ಎಂದ ಭೈರತಿ...!

ದಾವಣಗೆರೆ: ನಮ್ಮಲ್ಲಿ ಯಾವುದೇ ಬಿರುಕಿಲ್ಲ, ಒಗ್ಗಟ್ಟಾಗಿದ್ದೇವೆ. ಸಚಿವ ಸ್ಥಾನ ಸಿಗದಿದ್ದಕ್ಕೆ ಮುನಿರತ್ನ ಅಸಮಾಧಾನಗೊಂಡಿದ್ದರು. ಆದ್ರೆ ಈಗ ಸಚಿವ ಸ್ಥಾನ ಸಿಕ್ಕಿದೆ. ಮತ್ತೆ ಬಿಜೆಪಿ ಪಕ್ಷ ಅಧಿಕಾರಕ್ಕೆ ತರುವುದೇ ನಮ್ಮ ಗುರಿ. ಮುನಿರತ್ನ, ಸೋಮಶೇಖರ್ ಹಾಗೂ ನಾನು ಒಟ್ಟಿಗೆ ಕುಳಿತು ಚರ್ಚಿಸಿದ್ದೇವೆ. ಯಾವ ಭಿನ್ನಾಭಿಪ್ರಾಯವೂ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಸ್ಪಷ್ಟಪಡಿಸಿದ್ದಾರೆ.

ದಾವಣಗೆರೆಯ ಅಪೂರ್ವ ರೆಸಾರ್ಟ್ ನಲ್ಲಿ‌ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಪಕ್ಷ ಸಂಘಟನೆ ಬಗ್ಗೆ ಸಮಾಲೋಚನೆ ನಡೆಸಿದ್ದೇವೆ. ಎಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ನಮ್ಮ‌ ನಾಯಕರು. ಅದರಲ್ಲಿ ಎರಡು ಮಾತಿಲ್ಲ. ಹಿರಿಯರು, ಪಕ್ಷವನ್ನು ಹಗಲಿರುಳು ಕಷ್ಟಪಟ್ಟು ಕಟ್ಟಿದ್ದಾರೆ. ಈಗ ಮತ್ತೆ ಪಕ್ಷ ಸಂಘಟನೆ ಮಾಡಲು ಹೊರಟರೆ ನಾವೆಲ್ಲರೂ ಸಹಕಾರ ನೀಡುತ್ತೇವೆ. ಪಕ್ಷದ ಹೈಕಮಾಂಡ್ ಎಲ್ಲಿಯೂ ಯಾವುದನ್ನು ಬೇಡ ಎಂದು ಹೇಳಿಲ್ಲ ಎಂದು ತಿಳಿಸಿದರು.

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ, ಗೃಹ ಸಚಿವರು ಮಾಹಿತಿ ನೀಡುತ್ತಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಕ್ರಮ ತೆಗೆದುಕೊಳ್ಳಲಿದೆ ಎಂದ ಅವರು ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಲು ಸರ್ಕಾರ ಸಿದ್ದವಿದೆ ಎಂದು ಹೇಳಿದರು.

Edited By : Nagaraj Tulugeri
PublicNext

PublicNext

28/08/2021 10:34 pm

Cinque Terre

60.53 K

Cinque Terre

0

ಸಂಬಂಧಿತ ಸುದ್ದಿ