ಬೆಂಗಳೂರು: ಉತ್ತಮ ಕೆಲಸ ಕಾರ್ಯಗಳನ್ನು ಮಾಡುವ ಮೂಲಕ ಕೋವಿಡ್ ಸಂದರ್ಭದಲ್ಲಿ ಸೂಕ್ತ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಜವಾಬ್ದಾಯುವ ಜಿಲ್ಲಾಧಿಕಾರಿ ಹುದ್ದೆ ನಿಭಾಯಿಸಿದ್ದ ಜಿ. ಜಗದೀಶ್, ಇದೀಗ ಮುಖ್ಯಮಂತ್ರಿ ಅವರ ಜಂಟಿ ಕಾರ್ಯದರ್ಶಿ ಆಗಿ ನೇಮಕಗೊಂಡಿದ್ದಾರೆ.
ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ ಗೃಹಸಚಿವರಾಗಿದ್ದಾಗ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಜವಾಬ್ದಾರಿ ಹೊತ್ತಿದ್ದರು.ಆ ಸಮಯದಲ್ಲಿ ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ. ಜಗದೀಶ್ ಅವರು ಇದೀಗ ಕಾಕತಾಳೀಯ ಎಂಬಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜಂಟಿ ಕಾರ್ಯದರ್ಶಿ ಆಗಿ ನೇಮಕಗೊಂಡಿದ್ದಾರೆ.
ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಎಂ. ಕೂರ್ಮ ರಾವ್ ಅವರನ್ನು ಉಡುಪಿಯ ನೂತನ ಜಿಲ್ಲಾಧಿಕಾರಿ ವರ್ಗಾವಣೆ ಮಾಡಲಾಗಿದೆ. ಯಶವಂತ್ ವಿ. ಗುರುಕರ್ ಅವರನ್ನು ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನಿಯೋಜಿಸಲಾಗಿದೆ.
PublicNext
29/08/2021 11:14 pm