ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿಎಂ ಬದಲಾದ ಬಳಿಕ ರಾಜ್ಯಕ್ಕೆ ಅರುಣ್ ಸಿಂಗ್ ಪ್ರವಾಸ

ಬೆಂಗಳೂರು: ರಾಜ್ಯರಾಜಕಾರಣದಲ್ಲಿ ಸಿಎಂ ಬದಲಾವಣೆಯ ನಂತರ ಬಿಜೆಪಿ ರಾಜ್ಯ ಘಟಕದ ಉಸ್ತುವಾರಿ ಅರುಣ್ ಸಿಂಗ್ ಇಂದಿನಿಂದ ನಾಲ್ಕು ದಿನಗಳ ಕಾಲ ರಾಜ್ಯದ ಪ್ರವಾಸ ಕೈಗೊಂಡಿದ್ದಾರೆ. ಮೈಸೂರು, ಚನ್ನರಾಯಪಟ್ಟಣ, ಬೆಂಗಳೂರು ಮತ್ತು ಹುಬ್ಬಳ್ಳಿಗಳಲ್ಲಿ ನಿಗದಿಯಾಗಿರುವ ಪಕ್ಷದ ಸಭೆಗಳಲ್ಲಿ ಅವರು ಭಾಗವಹಿಸಲಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಬಳಿಕ ಅವರು ಇದೇ ಮೊದಲ ಬಾರಿ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ.

ಸೋಮವಾರ ಸಂಜೆ ಬೆಂಗಳೂರಿಗೆ ಬಂದು ಅಲ್ಲಿಂದ ನೇರವಾಗಿ ಮೈಸೂರಿಗೆ ತೆರಳಲಿದ್ದಾರೆ. ಸೆಪ್ಟೆಂಬರ್ 1 ರಂದು ಹಾಸನ ಮತ್ತು ಮಂಡ್ಯ ಜಿಲ್ಲಾ ಪದಾಧಿಕಾರಿಗಳ ಸಭೆ ಚನ್ನರಾಯಪಟ್ಟಣದಲ್ಲಿ ನಡೆಯಲಿದೆ. ಜಿಲ್ಲಾ ಪ್ರಮುಖ ನಾಯಕರ ಸಭೆ, ಮಂಡಲ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸೆಪ್ಟೆಂಬರ್ 2 ರಂದು ಬೆಂಗಳೂರಿನ ಮಲ್ಲೇಶ್ವರದ ಹವ್ಯಕ ಭವನದಲ್ಲಿ ಬೆಂಗಳೂರು, ದಕ್ಷಿಣ ಮತ್ತು ಕೇಂದ್ರ ಜಿಲ್ಲೆಯ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದಾದ ನಂತರ ಸೆಪ್ಟಂಬರ್ 3 ರಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಪುತ್ರಿ ವಿವಾಹ ಹುಬ್ಬಳ್ಳಿಯಲ್ಲಿ ನಡೆಯಲಿದ್ದು, ಮದುವೆ ಸಮಾರಂಭಕ್ಕೆ ಹಾಜರಾಗಲಿದ್ದಾರೆ. ಅದಾದ ನಂತರ ಅವರು ದೆಹಲಿಗೆ ತೆರಳಲಿದ್ದಾರೆ ಎಂದು ಪತ್ರಿಕಾ ಪ್ರಕಟಣೆ.

Edited By : Nirmala Aralikatti
PublicNext

PublicNext

30/08/2021 12:33 pm

Cinque Terre

60.08 K

Cinque Terre

1

ಸಂಬಂಧಿತ ಸುದ್ದಿ