ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಷ್ಣುಪುರದ ಶಾಸಕ ತನ್ಮಯ್ ಘೋಷ್ ಸೋಮವಾರ ಬಿಜೆಪಿಯನ್ನು ತೊರೆದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸೇರಿದ್ದಾರೆ.
ತನ್ಮಯ್ ಘೋಷ್ ಅವರು ಟಿಎಂಸಿ ಬಿಟ್ಟು ಬಿಜೆಪಿ ಸೇರಿದ ಆರು ತಿಂಗಳಲ್ಲೇ ಮತ್ತೆ ಮಮತಾ ಬ್ಯಾನರ್ಜಿ ಪಕ್ಷಕ್ಕೆ ಮರಳಿದ್ದಾರೆ. ಈ ವೇಳೆ ಬಿಜೆಪಿ ಸೇಡು ತೀರಿಸಿಕೊಳ್ಳುವ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಟಿಎಂಸಿ ಸೇರ್ಪಡೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿರುವ ತನ್ಮಯ್ ಘೋಷ್, "ಪಶ್ಚಿಮ ಬಂಗಾಳದ ಜನರಲ್ಲಿ ಗೊಂದಲ ಸೃಷ್ಟಿಸಲು ಬಿಜೆಪಿ ಪ್ರಯತ್ನಿಸುತ್ತಿದೆ" ಎಂದು ಆರೋಪಿಸಿದ್ದಾರೆ.
"ನಾನು ಪಶ್ಚಿಮ ಬಂಗಾಳದ ಕಲ್ಯಾಣಕ್ಕಾಗಿ ಮತ್ತೆ ಟಿಎಂಸಿಗೆ ಸೇರಲು ಎಲ್ಲರನ್ನೂ ಕೋರುತ್ತೇನೆ. ಕೇಂದ್ರದ ಏಜೆನ್ಸಿಗಳನ್ನು ಬಳಸಿ ಪಶ್ಚಿಮ ಬಂಗಾಳದ ಜನರ ಹಕ್ಕುಗಳನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಬೆಂಬಲಿಸುವಂತೆ ಕೇಳಿಕೊಳ್ಳುತ್ತೇನೆ" ಎಂದು ಜನರಿಗೆ ಮನವಿ ಮಾಡಿಕೊಂಡಿದ್ದಾರೆ.
PublicNext
30/08/2021 06:56 pm