ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಜಲಿಯನ್ ವಾಲಾಬಾಗ್ ಸ್ಮಾರಕ ನವೀಕರಣ : ರಾಗಾ ಗರಂ

ನವದೆಹಲಿ: ಜಲಿಯಾನ್ ವಾಲಾ ಬಾಗ್ ಸ್ಮಾರಕವನ್ನು ಪುನರುಜ್ಜೀವನಗೊಳಿಸಿರುವುದು ಹುತಾತ್ಮರಿಗೆ ಮಾಡಿದ ಅವಮಾನ" ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದ್ದಾರೆ. ‘ಹುತಾತ್ಮ‘ ಎಂಬುದರ ಅರ್ಥ ತಿಳಿಯದ ವ್ಯಕ್ತಿ ಮಾತ್ರ ಹೀಗೆ ಹುತಾತ್ಮರಿಗೆ ಅವಮಾನ ಮಾಡಲು ಸಾಧ್ಯ‘ ಎಂದು ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಶನಿವಾರ ನವೀಕೃತ ಜಲಿಯನ್ ವಾಲಾಬಾಗ್ ಸ್ಮಾರಕವನ್ನು ದೇಶಕ್ಕೆ ಸಮರ್ಪಿಸಿದ ನಂತರ, ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ಈ ರೀತಿ ವಾಗ್ದಾಳಿ ನಡೆಸಿದ್ದಾರೆ. ‘ನಾನು ಹುತಾತ್ಮರ ಮಗ. ಹುತಾತ್ಮರಿಗೆ ಮಾಡಿರುವ ಅವಮಾನವನ್ನು ನಾನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಇಂಥ ಕ್ರೌರ್ಯದ ವಿರುದ್ಧ ನಾವೆಲ್ಲರೂ ಹೋರಾಡುತ್ತೇವೆ‘ ಎಂದು ರಾಗಾ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಶನಿವಾರ ನವೀಕೃತ ಜಲಿಯಾನ್ ವಾಲಾಬಾಗ್ ಸ್ಮಾರಕವನ್ನು ಉದ್ಘಾಟಿಸಿ, ‘ಇತಿಹಾಸವನ್ನು ರಕ್ಷಿಸುವುದು ದೇಶದ ಕರ್ತವ್ಯ‘ ಎಂದು ಒತ್ತಿ ಹೇಳಿದ್ದರು. ಹಿಂದಿನ ಘಟನೆಗಳು ‘ನಮಗೆ ಅನೇಕ ಪಾಠಗಳನ್ನು ಕಲಿಸುತ್ತವೆ. ಹಾಗೆಯೇ, ದೇಶವನ್ನು ಮುನ್ನಡೆಸಲು ನಿರ್ದೇಶನ ನೀಡುತ್ತವೆ‘ ಎಂದು ಹೇಳಿದ್ದರು.

Edited By : Nirmala Aralikatti
PublicNext

PublicNext

31/08/2021 02:22 pm

Cinque Terre

46.01 K

Cinque Terre

4

ಸಂಬಂಧಿತ ಸುದ್ದಿ