ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ದೇಶ ವಿರೋಧಿ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣು: ಸಿಎಂ ಬೊಮ್ಮಾಯಿ...!

ಹುಬ್ಬಳ್ಳಿ: ದೇಶದ ವಿರುದ್ಧ ಚಟುವಟಿಕೆ ನಡೆಸುವವರ ಮೇಲೆ ಪೊಲೀಸ್ ಇಲಾಖೆ‌ ನಿಗಾ ಇಟ್ಟಿದೆ. ಉಗ್ರರ ಜೊತೆ ಕೈ ಜೋಡಿಸಿ, ಸ್ಲೀಪರ್ ಸೆಲ್ ಗಳಂತೆ ಕೆಲಸ ಮಾಡುವವರ ಮೇಲೆ‌ ನಿಗಾ ವಹಿಸಲಾಗುತ್ತಿದೆ‌ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿಂದು ಮಾತನಾಡಿದ ಅವರು, ಈಗಾಗಲೇ ಎನ್ಐಎ ಕೆಲವರನ್ನು ಲಿಪ್ಟ್ ಮಾಡಿದೆ‌.‌ ಎನ್‌ಐಎ ಜೊತೆ ನಮ್ಮ ಪೊಲೀಸರು ಕೂಡಿಕೊಂಡ ಕೆಲಸ ಮಾಡುತ್ತಿದ್ದಾರೆ ಎಂದರು.

ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸೇರಿದಂತೆ ಹಲವಾರು ಕೇಂದ್ರ ಸಚಿವರು ಹುಬ್ಬಳ್ಳಿ ಆಗಮಿಸುತ್ತಿದ್ದಾರೆ. ಬಳಿಕ ದಾವಣಗೆರೆ ಶಾ ಭೇಟಿ ನೀಡಲಿದ್ದಾರೆ. ಅಮಿತ್ ಶಾ ಜೊತೆ ರಾಜ್ಯದ ಹಲವಾರು ಅಭಿವೃದ್ಧಿ ವಿಚಾರಗಳ ಬಗ್ಗೆ ಚರ್ಚೆಯಾಗಲಿದೆ ಎಂದು ಅವರು ಹೇಳಿದರು.

ಸಾರ್ವಜನಿಕ ಗಣೇಶೋತ್ಸವಕ್ಕೆ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಕೊವಿಡ್ ಪರಿಸ್ಥಿತಿ ನೋಡಿಕೊಂಡು‌ ನಿರ್ಧಾರ ತೆಗೆದುಕೊಳ್ಳಲಾಗುವುದು. ಜಿಲ್ಲಾವಾರು ಕೊವಿಡ್ ಪರಿಸ್ಥಿತಿ ನೋಡಿಕೊಂಡು ತಜ್ಞರಿಗೆ ವರದಿ‌ ನೀಡಲು ಕೇಳಿದ್ದೇವೆ. ಸೆಪ್ಟೆಂಬರ್ 5 ರಂದು ಸೂಕ್ತ ನಿರ್ಧಾರ ಪ್ರಕಟಿಸಿಲಾಗುವುದು ಎಂದು ಭರವಸೆ ನೀಡಿದರು.

ಇನ್ನೂ ಪಾಲಿಕೆ ಚುನಾವಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಮೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಹುಬ್ಬಳ್ಳಿ ಧಾರವಾಡ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲಾಗುತ್ತಿದೆ. ಪಾಲಿಕೆ‌ ಚುನಾವಣೆಯಲ್ಲಿ ಬಿಜೆಪಿ‌ ಬೆಂಬಲಿಸುವಂತೆ ಸಿಎಮ್ ಮನವಿ ಮಾಡಿದರು.

ಈಗಾಗಲೇ ನಾವು ವೀಕೆಂಡ್ ಕರ್ಪ್ಯೂ ತೆಗೆದಿದ್ದೇವೆ. ಕೋವಿಡ್ ಪರಿಸ್ಥಿತಿ ನೋಡಿಕೊಂಡ ನೈಟ್ ಕರ್ಪ್ಯೂ ತೆಗೆಯುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಆರ್ಥಿಕ ಚಟುವಟಿಕೆ ಮೇಲೆ ನಿರ್ಬಂಧ ಹಾಕುವ ಉದ್ದೇಶ ಸರ್ಕಾರಕ್ಕಿಲ್ಲ. ಕೊವಿಡ್ ನಿರ್ವಹಣೆಯೂ ನಮಗೆ ಅಷ್ಟೇ ಮುಖ್ಯ. ಕೊವಿಡ್ ನಿಯಂತ್ರಣದಲ್ಲಿರುವ ಜಿಲ್ಲೆಗಳಲ್ಲಿ ನೈಟ್ ಕರ್ಪ್ಯೂ ಸಡಿಲಿಕೆ ಬಗ್ಗೆ ಮುಂದಿನ ದಿನದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು..

Edited By : Shivu K
PublicNext

PublicNext

01/09/2021 09:34 am

Cinque Terre

84.28 K

Cinque Terre

13

ಸಂಬಂಧಿತ ಸುದ್ದಿ