ಚಿತ್ರದುರ್ಗ : ರಾಜ್ಯದಲ್ಲಿ 25 ಜನ ಬಿಜೆಪಿ ಸಂಸದರು ಪ್ರಧಾನಿ ಮೋದಿ ಬಳಿ ಹೋಗಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಹಣವನ್ನು ಕೇಳುವ ಧೈರ್ಯವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಬಿಜೆಪಿ ಸಂಸದರ ವಿರುದ್ಧ ಆರೋಪಿಸಿದರು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಗೆ ಆಗಮಿಸಿ ಸುದ್ದಿಗೋಷ್ಠಿ ನಡೆಸಿ ಮಾತಾನಾಡಿದ ಅವರು ಹುಬ್ಬಳ್ಳಿ ಧಾರವಾಡ, ಗುಲ್ಬರ್ಗ, ಬೆಳಗಾವಿ ಜಿಲ್ಲೆಯ ಮೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರದ ವಿರುದ್ಧ ಬೇಸತ್ತಿರುವ ಜನರು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುತ್ತಾರೆ ಎಂದು ತಿಳಿಸಿದರು.
ರಾಜ್ಯದ ನಾಲ್ಕು ಜನ ಕೇಂದ್ರ ಮಂತ್ರಿಗಳು ಯಾವ ಪುರುಷಾರ್ಥಕ್ಕೆ ಜನರ್ಶಿವಾದ ಮಾಡಿದ್ದಾರೋ ಗೊತ್ತಿಲ್ಲ, ಈ ಬದಲಿಗೆ ಅವರು ಜನರ ಕ್ಷಮೆ ಯಾತ್ರೆ ಮಾಡಬೇಕಿತ್ತು. ಏಕೆಂದರೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡಿರುವ ಬಗ್ಗೆ ರಾಜ್ಯ ಜನತೆಯ ಕ್ಷಮೆ ಕೇಳುವ ಯಾತ್ರೆ ಕೈಗೊಳ್ಳಬೇಕಾಗಿತ್ತು ಎಂದರು.
ರಾಜ್ಯದ ಸಚಿವರು ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾಗಿದ್ದ ಹಣ, ತೆರಿಗೆ ಹಣ, ತೆಗೆದುಕೊಂಡು ಬಂದಿದ್ದರೆ ಜನರು ಆಶಿರ್ವಾದ ಮಾಡುತ್ತಿದ್ದರು. 2019/20 ರಲ್ಲಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ತೆರಿಗೆ ಹಣ ರೂ 35 ಸಾವಿರ ಕೋಟಿ ಬರಬೇಕಿತ್ತು, ಆದರೆ 1800 ಕೋಟಿ ಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ತಿಳಿಸಿದರು.
ರಾಜ್ಯಕ್ಕೆ ಹಣ ತರಲು ಕೇಂದ್ರ ಮಂತ್ರಿಗಳು, ಸಂಸದರು ತರಲು ವಿಫಲರಾಗಿದ್ದು, ಇವರಿಗೆ ಪ್ರಧಾನಿ ಮೋದಿ ಹತ್ತಿರ ಹೋಗಿ ಹಣ ಕೇಳುವ ಧೈರ್ಯ ಇಲ್ಲ, ರಾಜ್ಯದಲ್ಲಿ ಇಲಿಗಳಾಗಿ ವರ್ತನೆ ಮಾಡುತಿದ್ದಾರೆ ಎಂದು ಲೇವಡಿ ಮಾಡಿದರು. ಯಾದಗಿರಿಯಲ್ಲಿ ಬಿಜೆಪಿ ಮುಖಂಡರು ಕೇಂದ್ರ ಮಂತ್ರಿಯನ್ನು ನಾಡ ಬಂದೂಕು ಹಾರಿಸಿ ಸ್ವಾಗತಿಸಿದ್ದಾರೆ, ಅವರ ಮೇಲೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಬದಲಿಗೆ ಮೂರು ಜನ ಅಮಾಯಕ ಪೋಲಿಸರನ್ನು ಅಮಾನತು ಮಾಡಲಾಗಿದೆ. ಇಂತಹ ಸಾಂಸ್ಕೃತಿ ರಾಜ್ಯಕ್ಕೆ ಬರಬಾರದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದರು. ಸಭೆಯಲ್ಲಿ ಮಾಜಿ ಸಚಿವ ಹೆಚ್. ಆಂಜನೇಯ, ಡಿ. ಸುಧಾಕರ್, ಮಾಜಿ ಶಾಸಕ ಎ.ವಿ. ಉಮಾಪತಿ, ಗೋವಿಂದಪ್ಪ ಸೇರಿದಂತೆ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.
PublicNext
01/09/2021 04:00 pm