ಮೈಸೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರ ನಾಲಿಗೆ ಸರಿಯಾಗಿದ್ದಿದ್ದರೆ ಜೆಡಿಎಸ್ಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ಬಿಜೆಪಿ ಉಸ್ತುವಾರಿ ಅರಣ್ ಸಿಂಗ್ ದುಡ್ಡು ವಸೂಲಿಗಾಗಿ ಕರ್ನಾಟಕಕ್ಕೆ ಬರುತ್ತಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಜೆಡಿಎಸ್ನವರು ದುಡ್ಡಿಗಾಗಿ ರಾಜಕಾರಣ ಮಾಡುತ್ತಾರೆ ಎಂದು ತಿರುಗೇಟು ನೀಡಿದ್ದಾರೆ. "ಹಣದ ಮೇಲೆ ರಾಜಕಾರಣ ಮಾಡುವುದು ಜೆಡಿಎಸ್ ಸಂಸ್ಕೃತಿ. ಹಳದಿ ರೋಗದವರಿಗೆ ನೋಡಿದ್ದೆಲ್ಲಾ ಹಳದಿಯಾಗಿ ಕಾಣಿಸುತ್ತದೆ. ಜೆಡಿಎಸ್ ಪರಿಸ್ಥಿತಿ ಏನೆಂಬುದು ರಾಜ್ಯದ ಜನರಿಗೆ ಗೊತ್ತಿದೆ" ಎಂದು ಕುಟುಕಿದ್ದಾರೆ.
ಬೆಲೆ ಏರಿಕೆ ಕುರಿತ ಪ್ರಶ್ನೆಗೆ, ‘ಯುಪಿಎ ಕಾಲಘಟ್ಟಕ್ಕೂ ಈಗಿನ ಪರಿಸ್ಥಿತಿಗೂ ಹೋಲಿಕೆ ಮಾಡಬೇಕು. ಬೆಲೆ ಏರಿಕೆ ನಿಯಂತ್ರಿಸಲು ನಮ್ಮ ಸರ್ಕಾರ ಪ್ರಯತ್ನಿಸುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿನ ಏರುಪೇರಿನಿಂದ ವ್ಯತ್ಯಾಸವಾಗುತ್ತಿದೆ’ ಎಂದು ಉತ್ತರಿಸಿದರು.
PublicNext
01/09/2021 05:12 pm