ಬೆಳಗಾವಿ: 20 ವರ್ಷಗಳಲ್ಲೇ ಕಾಂಗ್ರೆಸ್ ಪಕ್ಷವು ನಿರ್ನಾಮ ಆಗುತ್ತದೆ. ಈ ಮೂಲಕ ಮಾಜಿ ಪ್ರಧಾನಿ ದಿವಂಗತ ಅಟಲ್ ವಾಜಪೇಯಿ ಅವರ ಕನಸು ನನಸಾಗುತ್ತದೆ ಎಂದು ಆಹಾರ ಹಾಗೂ ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, "ಕಾಂಗ್ರೆಸ್ ಹಾಗೂ ಎಂಇಎಸ್ ಎರಡು ಸೇರಿ ಅಡಳಿತ ಮಾಡುತ್ತಿವೆ. ಜನ ಈ ಎರಡೂ ಪಕ್ಷಗಳಿಗೆ ಬುದ್ಧಿ ಕಲಿಸಬೇಕಿದೆ. ಐದು ವರ್ಷದಲ್ಲಿ ಅಭಿವೃದ್ಧಿ ಮಾಡಲಿಲ್ಲ ಅಂದರೆ ನಮ್ಮನ್ನು ಮನೆಗೆ ಕಳುಹಿಸಿ. ಬೆಳಗಾವಿಗೆ ಕೇಂದ್ರ ಸರ್ಕಾರ ಒಂದು ಸಾವಿರ ಕೋಟಿ ಅನುದಾನ ನೀಡಿದೆ. ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಬಿಜೆಪಿ ಪಕ್ಷ ಇನ್ನೂ 20 ವರ್ಷ ಅಧಿಕಾರದಲ್ಲಿರುತ್ತದೆ. ಬೆಳಗಾವಿಯ ಮಹಾನಗರ ಪಾಲಿಕೆಯಲ್ಲೂ 20 ವರ್ಷ ಬಿಜೆಪಿ ಪಕ್ಷ ಅಧಿಕಾರದಲ್ಲಿರಬೇಕು" ಎಂದು ಅಭಿಪ್ರಾಯಪಟ್ಟರು.
ಕರ್ನಾಟಕದ ಮುಸ್ಲಿಮರು ಭಾರತೀಯ ಜನತಾ ಪಕ್ಷಕ್ಕೆ ಮತ ಹಾಕಬೇಕು. ಎಂಐಎಂ ಹಾಗೂ ಎಂಇಎಸ್ ಧ್ವಜಗಳು ಚುನಾವಣೆ ಬಂದಾಗ ಮಾತ್ರ ಕಾಣುತ್ತಿವೆ. ಅಭಿವೃದ್ಧಿಗಾಗಿ ನಾವು ನಿರಂತರ ದೇಶ ಆಳುತ್ತಿದ್ದೇವೆ. ಹೀಗಾಗಿ ಬೆಳಗಾವಿ ಪಾಲಿಕೆಯಲ್ಲಿ ಬಿಜೆಪಿಗೆ ಅವಕಾಶ ನೀಡಿ. ಎಂಐಎಂ ಬಿಜೆಪಿ ಪಕ್ಷದ ಏಜೆಂಟ್ ಎನ್ನುವ ಆರೋಪ ವಿಚಾರವಾಗಿ ಬಿಜೆಪಿ ಪಕ್ಷ ಜನರ ಹಾಗೂ ಅಭಿವೃದ್ಧಿಯ ಏಜೆಂಟ್. ಬೆಳಗಾವಿ ಪಾಲಿಕೆಯಲ್ಲಿ 35ಕ್ಕೂ ಅಧಿಕ ಸೀಟು ಗೆಲ್ಲುತ್ತೇವೆ. ಎಂಇಎಸ್ ಜೊತೆಗೆ ಯಾವುದೇ ಹೊಂದಾಣಿಕೆ ಇಲ್ಲ" ಎಂದು ಸ್ಪಷ್ಟಪಡಿಸಿದರು.
PublicNext
01/09/2021 05:35 pm