ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ತಮ್ಮ ಪುತ್ರಿಯ ವಿವಾಹದ ಸಂಭ್ರಮದಲ್ಲಿದ್ದಾರೆ. ಪ್ರಲ್ಹಾದ್ ಜೋಶಿ ಪುತ್ರಿ ಅರ್ಪಿತಾ ಮತ್ತು ಹೃಷಿಕೇಶ್ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಹುಬ್ಬಳ್ಳಿಯ ಖಾಸಗಿ ಹೋಟೆಲ್ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಚಿವ ಆರ್. ಅಶೋಕ್ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿ ನವ ವಧು-ವರರನ್ನು ಹಾರೈಸಿದರು.
ನಾಳೆ ಸಂಜೆ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ನಾಳೆಯೂ ಕೇಂದ್ರ ಸೇರಿ ರಾಜ್ಯ ನಾಯಕರ ದಂಡೇ ಹುಬ್ಬಳ್ಳಿಗೆ ಆಗಮಿಸಲಿದೆ.
PublicNext
01/09/2021 10:37 pm