ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನೆಕ್ಸ್ಟ್ ಫೇಸ್ ಆಫ್ ದಿ ಬಿಜೆಪಿ ಬಸವರಾಜ್ ಬೊಮ್ಮಾಯಿ...! ಅಮಿತ್ ಶಾ ಘೋಷಣೆ

ದಾವಣಗೆರೆ: ಕರ್ನಾಟಕದಲ್ಲಿ ಯಾರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಯಡಿಯೂರಪ್ಪರ ನಂತರ ಯಾರು ಬಿಜೆಪಿಯ ಪ್ರಭಾವಿ ನಾಯಕರು ಎಂಬ ಚರ್ಚೆಗೆ ತೆರೆ ಎಳೆಯುವ ಪ್ರಯತ್ನವೂ ಆಗಿದೆ. ಹೌದು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಈ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.

ಇನ್ನು 2023ರಲ್ಲಿ ಎದುರಾಗುವ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸಿ, ಮತ್ತೆ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಬಿ. ಎಸ್‌. ಯಡಿಯೂರಪ್ಪ ಸ್ವಂತ ನಿರ್ಧಾರದಿಂದ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು‌. ಅವರ ನಿರ್ಣಯ ಹಾಗೂ ಪಕ್ಷದ ನಿರ್ಧಾರದಂತೆ ಬೊಮ್ಮಾಯಿ ಸಿಎಂ ಆಗಿದ್ದಾರೆ. ಅವರ ರಾಜಕಾರಣ, ನಡವಳಿಕೆ ಮತ್ತು ವೈಯಕ್ತಿಕ ಜೀವನವೂ ಉತ್ತಮವಾಗಿದೆ. ಬೊಮ್ಮಾಯಿ ನೇತೃತ್ವದಲ್ಲಿ ಪಕ್ಷ ಮತ್ತಷ್ಟು ಬಲಿಷ್ಠಗೊಳ್ಳಲಿದೆ ಎಂದು ಹೇಳಿದರು.

Edited By : Nagesh Gaonkar
PublicNext

PublicNext

02/09/2021 06:14 pm

Cinque Terre

97.66 K

Cinque Terre

20

ಸಂಬಂಧಿತ ಸುದ್ದಿ