ಮೈಸೂರು: 8 ರೂ. ಬೆಲೆ ಬಾಳುವ ಬಟ್ಟೆ ಬ್ಯಾಗ್ ಗೆ ರೋಹಿಣಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಸಿಂಧೂರಿ 52 ರೂ. ಕೊಟ್ಟು ಖರೀದಿಸಿದ್ದಾರೆ ಎಂದು ಜೆಡಿಎಸ್ ಶಾಸಕ ಸಾ.ರಾ ಮಹೇಶ್ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಸಾ.ರಾ ಮಹೇಶ್, ಮೈಸೂರು ಜಿಲ್ಲೆಗೆ ಬಂದ ಎಂಟು ಕೋಟಿ ಎಸ್ ಎಸ್ ಸಿ ಅನುಧಾನ ದುರ್ಬಳಕೆ ಮಾಡಿಕೊಳ್ಳಲಾಗಿದೆ. ರೋಹಿಣಿ ಸಿಂಧೂರಿ ಪ್ಲಾಸ್ಟಿಕ್ ಮುಕ್ತ ಮೈಸೂರು ಮಾಡುವ ನೆಪದಲ್ಲಿ ಹಣ ಲೂಟಿ ಮಾಡಿದ್ದಾರೆ. ಬಟ್ಟೆ ಬ್ಯಾಗ್ ಖರೀದಿಯಲ್ಲಿ ಭಾರೀ ಭ್ರಷ್ಟಾಚಾರ ಮಾಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.
ಬಟ್ಟೆ ಬ್ಯಾಗ್ ಖರೀದಿಗೆ ಜಿಎಸ್ಟಿ ಸೇರಿ 9 ರೂ ಆಗುತ್ತದೆ. ಆದರೆ ಇವರು ಪ್ರತೀ ಬ್ಯಾಗ್ 52 ರೂಪಾಯಿಗೆ ಖರೀದಿ ಮಾಡಿದ್ದಾರೆ. 14,71,458 ಬ್ಯಾಗ್ಗಳ ಖರೀದಿ ಮಾಡಿದ್ದಾರೆ. ವಾಸ್ತವ ಬೆಲೆ 1.47,14,586 ರೂಪಾಯಿ. ಆದರೆ, ಇವರು 7.65 ಕೋಟಿಯಷ್ಟು ಬಿಲ್ ಮಾಡಲು ಹೊರಟಿದ್ದಾರೆ ಎಂದರು.
ಬರೋಬ್ಬರಿ ಆರು ಕೋಟಿಗೂ ಅಧಿಕ ಭ್ರಷ್ಟಾಚಾರ ನಡೆದಿದೆ. ಈ ಭ್ರಷ್ಟಾಚಾರ ಮುಚ್ಚಿ ಹಾಕಿಕೊಳ್ಳಲು ಸಿಎಂ ಮನೆಗೆ ಹೋಗಿದ್ದರು. ಇಂದೇ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಈ ವಿಚಾರ ಚರ್ಚೆ ಮಾಡುತ್ತೇನೆ. ರೋಹಿಣಿ ಸಿಂಧೂರಿಯನ್ನು ಅಮಾನತು ಮಾಡಿ ತನಿಖೆ ಮಾಡದಿದ್ದರೆ ಧರಣಿ ಕೂರುತ್ತೇನೆ ಎಂದು ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ.
PublicNext
03/09/2021 05:30 pm