ಮೈಸೂರು: ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಹಾಗೂ IAS ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಟಾಪಟಿ ಮುಂದುವರೆದಿದೆ. ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ರೋಹಿಣಿ ಸಿಂಧೂರಿ ವರ್ಗಾವಣೆಯಾದ ಬಳಿಕವೂ ಸಾರಾ ಮಹೇಶ್ ಮತ್ತೆ ಸಿಡಿದೆದ್ದಿದ್ದಾರೆ.
ಮೈಸೂರು ಡಿಸಿ ಆಗಿದ್ದ ಸಮಯದಲ್ಲಿ ರೋಹಿಣಿ ಸಿಂಧೂರಿ, ಪರಿಸರ ಸ್ನೇಹಿ ಬ್ಯಾಗ್ ಗಳಲ್ಲಿ ಅವ್ಯವಹಾರ ನಡೆಸಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.
ಸದ್ಯ ವಾಟ್ಸ್ ಅಪ್ ಗ್ರೂಪ್ ನಲ್ಲಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ ರೋಹಿಣಿ ಸಿಂಧೂರಿ, ನನ್ನ ಮೇಲೆ ಸತ್ಯಕ್ಕೆ ದೂರವಾದ ಆರೋಪ ಮಾಡಲಾಗಿದೆ. ಇದು ನನ್ನ ವಿರುದ್ಧ ನಡೆಯುತ್ತಿರುವ ವ್ಯವಸ್ಥಿತವಾದ ಪಿತೂರಿಯ ಮುಂದುವರಿದ ದಾಳಿ. ತಾವು ಮಾಡಿರುವ ಅಕ್ರಮ ಮುಚ್ಚಿಕೊಳ್ಳಲು ಮತ್ತು ಮಾಡಿರುವ ಅಕ್ರಮಗಳ ಬಗ್ಗೆ ಯಾವ ಅಧಿಕಾರಿಯೂ ತನಿಖೆಗೆ ಮುಂದಾಗಬಾರದೆಂದು ಹೆದರಿಸುವ ತಂತ್ರದ ಭಾಗ ಇದು. ಇದಕ್ಕೆ ಯಾವ ಅಧಿಕಾರಿಗಳು ಹೆದರದೆ ಇರುವ ಸತ್ಯ ಬಹಿರಂಗಪಡಿಸಬೇಕೆಂದು ಗುಡುಗಿದ್ದಾರೆ.
ಬಟ್ಟೆ ಬ್ಯಾಗ್ ಖರೀದಿ ಮಾಡಿರುವುದು ಕರ್ನಾಟಕ ಕೈ ಮಗ್ಗ ಅಭಿವೃದ್ಧಿ ಪ್ರಾಧಿಕಾರದಲ್ಲಿ. ಇದು ಸರ್ಕಾದ ಅಧೀನ ಸಂಸ್ಥೆ. ನನ್ನ ಅವಧಿಯಲ್ಲಿ ಒಂದೇ ಒಂದು ಪೈಸೆಯೂ ಹಣ ಬಿಡುಗಡೆಯಾಗಿಲ್ಲ. ಇದರಲ್ಲಿ ಅಕ್ರಮ ಹೇಗೆ ಬರುತ್ತೆ? ನನ್ನ ಮೇಲಿನ ಎಲ್ಲಾ ಆರೋಪಗಳು ಸುಳ್ಳು ಎಂದಿದ್ದಾರೆ.
PublicNext
03/09/2021 09:28 pm