ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದಾವಣಗೆರೆ: ಎಂ.‌ ಬಿ. ಪಾಟೀಲ್ ಗೆ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಟಾಂಗ್..!

ದಾವಣಗೆರೆ: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಕೈ ಹಾಕಿದ್ದಕ್ಕೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜನರು ಪಾಠ ಕಲಿಸಿದ್ದಾರೆ. ಶಾಸಕ ಎಂ. ಬಿ‌. ಪಾಟೀಲ್ ಅವರು ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಎತ್ತಿದ್ದರು. ಮತ್ತೆ ಈ ಬಗ್ಗೆ ಪ್ರಸ್ತಾಪ ಮಾಡಿರುವುದು ಸರಿಯಲ್ಲ. ಅಖಂಡ ವೀರಶೈವ ಲಿಂಗಾಯತ ಸಮುದಾಯ ಬೇಕು. ಪ್ರತ್ಯೇಕ ಧರ್ಮದ ಅವಶ್ಯಕತೆ ಇಲ್ಲ‌. ಇದೇ ರೀತಿ ಮಾತನಾಡಿದರೆ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೊನ್ನಾಳಿ ಶಾಸಕ ಎಂ‌. ಪಿ. ರೇಣುಕಾಚಾರ್ಯ ಕಿಡಿಕಾರಿದರು.

ನ್ಯಾಮತಿಯಲ್ಲಿ ಮಾತನಾಡಿದ ಅವರು, ಅಮಿತ್ ಶಾ ಹೇಳಿಕೆಯನ್ನು ಮಾಧ್ಯಮಗಳಲ್ಲಿ ತಪ್ಪಾಗಿ ಬಿಂಬಿಸಲಾಗುತ್ತಿದೆ. ಯಡಿಯೂರಪ್ಪ ಅವರನ್ನು ಸೈಡ್ ಲೈನ್ ಮಾಡಿದರು. ಜಗದೀಶ್ ಶೆಟ್ಟರ್ ಅವರನ್ನು ನಿರ್ಲಕ್ಷಿಸಲಾಗುತ್ತಿದೆ ಎಂಬುದು ಶುದ್ಧ ಸುಳ್ಳು ಎಂದು ತಿಳಿಸಿದರು.

ಮುಂದಿನ ಚುನಾವಣೆಯನ್ನು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದು, ಯಾರು ಮುಖ್ಯಮಂತ್ರಿ ಆಗಿರುತ್ತಾರೋ ಅವರ ನೇತೃತ್ವದಲ್ಲಿ ಹೋಗುವುದು ಸಹಜ‌. ಯಡಿಯೂರಪ್ಪರ ಮಾರ್ಗದರ್ಶನವೂ ಇರುತ್ತದೆ ಎಂದಿದ್ದಾರೆ‌.

Edited By : Shivu K
PublicNext

PublicNext

04/09/2021 02:07 pm

Cinque Terre

64.31 K

Cinque Terre

1